The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಪ್ರಣಬ್ ಮುಖರ್ಜಿ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:34 am
ಇಂದು ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು. ದಶಕಗಳ ಕಾಲ ತಮ್ಮ ಸಾರ್ವಜನಿಕ ಜೀವನದಲ್ಲಿ ಪ್ರಣಬ್ ಮುಖರ್ಜಿ ಅವರು ಅಚಲ ಸಮರ್ಪಣಾಭಾವದಿಂದ ಭಾರತಕ್ಕೆ ಸೇವೆ ಸಲ್ಲಿಸಿದ ಒಬ್ಬ ಶ್ರೇಷ್ಠ ರಾಜನೀತಿಜ್ಞ ಮತ್ತು ಅಸಾಧಾರಣ ಜ್ಞಾನ ಹೊಂದಿದ್ದ ತಜ್ಞ ಎಂದು ಬಣ್ಣಿಸಿದ್ದಾರೆ.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ಒಡನಾಟ ಅವಿಸ್ಮರಣೀಯ: ಪ್ರಧಾನಮಂತ್ರಿ
December 11th, 09:15 pm
ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ತಮ್ಮ ಒಡನಾಟವನ್ನು ಸದಾ ಸ್ಮರಿಸುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಂದು ಹೇಳಿದ್ದಾರೆ. ಶ್ರೀ ಪ್ರಣಬ್ ಮುಖರ್ಜಿಯವರೊಂದಿಗಿನ ತಮ್ಮ ಹಲವು ಸಂವಾದಗಳನ್ನು ನೆನಪು ಮಾಡಿದ ಶರ್ಮಿಷ್ಠಾ ಮುಖರ್ಜಿ ಅವರಿಗೆ ಕೃತಜ್ಞತೆ ಅರ್ಪಿಸಿರುವ ಶ್ರೀ ಮೋದಿ ಅವರು, ಶ್ರೀ ಮುಖರ್ಜಿಯವರ ಆಳವಾದ ಜ್ಞಾನ ಮತ್ತು ಬುದ್ಧಿವಂತಿಕೆಗೆ ಸರಿಸಾಟಿಯಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:29 am
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿದ್ದಾರೆ.ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದರು
December 11th, 10:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
March 26th, 04:26 pm
PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
March 26th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.ಮಾಜಿ ರಾಷ್ಟ್ರಪತಿ ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಿ ಸಂತಾಪ
August 31st, 06:53 pm
ಮಾಜಿ ರಾಷ್ಟ್ರಪತಿ ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ.ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನ ಮಂತ್ರಿ ಅಭಿನಂದನೆ.
January 25th, 09:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹೇಳಿದ್ದಾರೆ.ಎನ್ . ಡಿ. ಎ ಸರಕಾರ ದೇಶದಲ್ಲಿ ಕೆಲಸದ ಸಂಸ್ಕೃತಿಯನ್ನು ಬದಲಾಯಿಸಿದೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
February 07th, 01:41 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ
February 07th, 01:40 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.ರಾಷ್ಟ್ರಪತಿಯಾಗಿ ತಮ್ಮ ಕಚೇರಿಯಲ್ಲಿ ಕೊನೆಯ ದಿನ ತಾವು ಪ್ರಧಾನಮಂತ್ರಿಯವರಿಂದ ಸ್ವೀಕರಿಸಿದ ಪತ್ರವನ್ನು ಹಂಚಿಕೊಂಡ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ , ಪ್ರಧಾನಿಯವರಿಂದ ಬಂದ ಪತ್ರ ತಮ್ಮ ಹೃದಯ ತಟ್ಟಿತು ಎಂದು ಹೇಳಿಕೆ
August 03rd, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಭಾರತದ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ ಕೊನೆಯ ದಿನ ಸ್ವೀಕರಿಸಿದ ಪತ್ರವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿಯವರಿಂದ ಬಂದ ಪತ್ರ ತಮ್ಮ ಹೃದಯ ತಟ್ಟಿತು ಎಂದು ಅವರು ಹೇಳಿದ್ದಾರೆ.ಘನವೆತ್ತ ರಾಷ್ಟ್ರಪತಿಗಳ ಆಯ್ದ ಭಾಷಣಗಳು (ಭಾಗ 4) ಬಿಡುಗಡೆ ಸಮಾರಂಭದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಭಾಷಣ.
July 24th, 11:20 pm
ಮಿಶ್ರ ಭಾವನೆಗಳನ್ನು ಒಳಗೊಂಡ ಕ್ಷಣವಿದು. ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ದಾ ಅವರ ಕಾರ್ಯನಿರ್ವಹಣೆಯ ಕೊನೆಯ ದಿನವಿಂದು. ಒಂದು ರೀತಿಯಲ್ಲಿ ಈ ಸಮಾರಂಭದಲ್ಲಿ ನಾನು ಮಾತನಾಡಲು ನಿಂತಾಗ ಬಹಳ ನೆನಪುಗಳು ಮನ:ಪಟದಲ್ಲಿ ಮೂಡುವುದು ಸಹಜ, ಸ್ವಾಭಾವಿಕ. ಅವರ ವ್ಯಕ್ತಿತ್ವ, ಅವರ ಕಾರ್ಯಕ್ಷಮತೆಗಳ ಬಗ್ಗೆ ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.