ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
October 24th, 11:20 am
ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
October 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.