ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 23rd, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಸಮಾಜದ ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಕೃಷಿಯ ಪ್ರಗತಿ ಮತ್ತು ರೈತರ ಸಮೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕೃತಜ್ಞ ರಾಷ್ಟ್ರವು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಇಸ್ರೇಲ್ ಪ್ರಧಾನಮಂತ್ರಿಯವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
December 10th, 07:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹ ನಿಮಿತ್ತ ಅವರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
November 29th, 09:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆತ್ಮೀಯ ಸ್ನೇಹಿತ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹಕ್ಕಾಗಿ ಅವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:46 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.2025ರ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:44 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್ ನಲ್ಲಿ ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 23rd, 09:41 pm
ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದರು.ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ
October 29th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 21st, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಅತೀವ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
October 15th, 02:41 pm
ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಮತ್ತು ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಒಬ್ಬ ಉನ್ನತ ರಾಜನೀತಿಜ್ಞ ಮತ್ತು ಭಾರತದ ಪ್ರೀತಿಯ ಸ್ನೇಹಿತರಾಗಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ದಿನಗಳಿಂದ ಅವರನ್ನು ಹತ್ತಿರದಿಂದ ತಿಳಿದುಕೊಳ್ಳುವ ಸೌಭಾಗ್ಯ ನನಗೆ ಸಿಕ್ಕಿತು ಮತ್ತು ನಮ್ಮ ಒಡನಾಟವು ವರ್ಷಗಳಿಂದ ಮುಂದುವರೆದಿದೆ ಎಂದು ಶ್ರೀ ಮೋದಿ ಅವರು ಹೇಳಿದರು. ಶ್ರೀ ರೈಲಾ ಒಡಿಂಗಾ ಅವರು ಭಾರತದ ಸಂಸ್ಕೃತಿ, ಮೌಲ್ಯಗಳು ಮತ್ತು ಪ್ರಾಚೀನ ಜ್ಞಾನದ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿದ್ದರು, ಇದು ಭಾರತ-ಕೀನ್ಯಾ ಸಂಬಂಧಗಳನ್ನು ಬಲಪಡಿಸುವ ಅವರ ಪ್ರಯತ್ನಗಳಲ್ಲಿ ಪ್ರತಿಫಲಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು.ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಮಂತ್ರಿ ಅಭಿನಂದನೆ
October 09th, 10:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದರು ಮತ್ತು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಅವರನ್ನು ಅಭಿನಂದಿಸಿದರು.ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ
September 26th, 08:51 am
ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ಶುಭಕೋರಿದ ಪ್ರಧಾನಮಂತ್ರಿ
September 13th, 08:57 am
ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿಯವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಶುಭಾಶಯಗಳನ್ನು ಕೋರಿದ್ದಾರೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.ಮರು ಆಯ್ಕೆಯಾದ ನಾರ್ವೇಜಿಯನ್ ಪ್ರಧಾನಮಂತ್ರಿ ಜೋನಾಸ್ ಗಹರ್ ಸ್ಟೋರೆ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
September 10th, 06:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾರ್ವೆಯ ಪ್ರಧಾನಮಂತ್ರಿಗಳಾಗಿ ಮರು ಆಯ್ಕೆಯಾದ ಜೋನಾಸ್ ಗಹರ್ ಸ್ಟೋರೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.PM Modi arrives in London, United Kingdom
July 24th, 12:15 pm
Prime Minister Narendra Modi arrived in United Kingdom a short while ago. In United Kingdom, PM Modi will hold discussions with UK PM Starmer on India-UK bilateral relations and will also review the progress of the Comprehensive Strategic Partnership.ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು
June 24th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಗೌರವ ನಮನ
May 21st, 08:34 am
ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಐತಿಹಾಸಿಕ ಎರಡನೇ ಅವಧಿಗೆ ಆಯ್ಕೆಯಾದ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
May 06th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಆಸ್ಟ್ರೇಲಿಯಾದ 32ನೇ ಪ್ರಧಾನಮಂತ್ರಿಯಾಗಿ ಐತಿಹಾಸಿಕ ರೀತಿಯಲ್ಲಿ ಪುನರಾಯ್ಕೆಗೊಂಡುದಕ್ಕಾಗಿ ಅವರನ್ನು ಅಭಿನಂದಿಸಿದರು.