Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21st, 04:25 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam
December 21st, 12:00 pm
In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
November 26th, 10:10 am
ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು
November 26th, 10:00 am
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.Cabinet Approves RDI Scheme in Strategic and Sunrise Domains
July 01st, 04:59 pm
The Union Cabinet chaired by PM Modi has approved the Research Development and Innovation (RDI) Scheme with a corpus of Rs. One lakh Crore. It fosters self-reliance and global competitiveness in private sector thereby facilitating a conducive innovation ecosystem for the country as it marches towards Viksit Bharat at 2047.ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 02:06 pm
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ₹8,800 ಕೋಟಿ ರೂಪಾಯಿ ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
May 02nd, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ 8,800 ಕೋಟಿ ರೂ. ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಬಹುಪಯೋಗಿ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭಗವಾನ್ ಆದಿ ಶಂಕರಾಚಾರ್ಯರ ಜಯಂತಿಯ ಶುಭ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂರು ವರ್ಷಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ಸಿಕ್ಕಿತ್ತು ಎಂದು ಹೇಳಿದರು. ತಮ್ಮ ಸಂಸದೀಯ ಕ್ಷೇತ್ರವಾದ ಕಾಶಿಯಲ್ಲಿರುವ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು. ಈ ಪ್ರತಿಮೆ ಆದಿ ಶಂಕರಾಚಾರ್ಯರ ಅಪಾರ ಆಧ್ಯಾತ್ಮಿಕ ಜ್ಞಾನ ಮತ್ತು ಬೋಧನೆಗಳಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಅವರು ಒತ್ತಿ ಹೇಳಿದರು. ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮದಲ್ಲಿ ಆದಿ ಶಂಕರಾಚಾರ್ಯರ ದೈವಿಕ ಪ್ರತಿಮೆಯನ್ನು ಅನಾವರಣಗೊಳಿಸುವ ಗೌರವ ತಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕೇದಾರನಾಥ ದೇವಾಲಯದ ಬಾಗಿಲುಗಳು ಭಕ್ತರಿಗಾಗಿ ತೆರೆದಿರುವುದು ಇಂದು ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ಕೇರಳದಿಂದ ಬಂದ ಆದಿ ಶಂಕರಾಚಾರ್ಯರು ದೇಶದ ವಿವಿಧ ಮೂಲೆಗಳಲ್ಲಿ ಮಠಗಳನ್ನು ಸ್ಥಾಪಿಸಿ ರಾಷ್ಟ್ರದ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅವರ ಪ್ರಯತ್ನಗಳು ಏಕೀಕೃತ ಮತ್ತು ಆಧ್ಯಾತ್ಮಿಕವಾಗಿ ಪ್ರಬುದ್ಧವಾದ ಭಾರತಕ್ಕೆ ಅಡಿಪಾಯ ಹಾಕಿದವು ಎಂದು ಅವರು ಒತ್ತಿ ಹೇಳಿದರು.ಮಾರ್ಚ್ 4ರಂದು ಬಜೆಟ್ ನಂತರದ ಮೂರು ವೆಬಿನಾರ್‌ಗಳಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
March 03rd, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಾಹ್ನ 12:30ರ ಸುಮಾರಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಬಜೆಟ್ ನಂತರದ ಮೂರು ವೆಬಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಈ ವೆಬಿನಾರ್‌ಗಳನ್ನು ಬೆಳವಣಿಗೆಯ ಎಂಜಿನ್ ಆಗಿ ಎಂಎಸ್‌ಎಂಇಯಲ್ಲಿನಡೆಸಲಾಗುತ್ತಿದೆ; ಉತ್ಪಾದನೆ, ರಫ್ತು ಮತ್ತು ಪರಮಾಣು ಶಕ್ತಿ ಕಾರ್ಯಾಚರಣೆಗಳು; ನಿಯಂತ್ರಣ, ಹೂಡಿಕೆ ಮತ್ತು ಸುಗಮ ವ್ಯಾಪಾರ ಸುಧಾರಣೆಗಳು. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ET Now ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣದ ಪಠ್ಯ
February 15th, 08:30 pm
ಪ್ರಧಾನಿ ಮೋದಿ ಅವರು ET Now ಜಾಗತಿಕ ವ್ಯಾಪಾರ ಶೃಂಗಸಭೆ 2025 ಅನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಧಾರಣೆಗಳನ್ನು ಎತ್ತಿ ತೋರಿಸಿದರು. ಸ್ವಾಮಿತ್ವ ಯೋಜನೆ ಮತ್ತು ಬ್ಯಾಂಕಿಂಗ್ ಸುಧಾರಣೆಗಳಂತಹ ಪರಿವರ್ತನಾ ನೀತಿಗಳನ್ನು ಮನ್ನಣೆ ನೀಡುವ ಮೂಲಕ ಜಾಗತಿಕ ಆರ್ಥಿಕ ನಾಯಕನಾಗಿ ಭಾರತದ ಏರಿಕೆಯನ್ನು ಅವರು ಒತ್ತಿ ಹೇಳಿದರು. ಸಕಾರಾತ್ಮಕ ಮನಸ್ಥಿತಿ, ತ್ವರಿತ ನ್ಯಾಯ ಮತ್ತು ವ್ಯಾಪಾರ ಮಾಡುವ ಸುಲಭತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು, ವಿಕಸಿತ್ ಭಾರತಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
February 15th, 08:00 pm
ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.ಪಿಕ್ಸೆಲ್ ಸ್ಪೇಸ್ ನಿಂದ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿದೆ : ಪ್ರಧಾನಮಂತ್ರಿ
January 17th, 05:30 pm
ಪಿಕ್ಸೆಲ್ ಸ್ಪೇಸ್ ಬಾಹ್ಯಾಕಾಶ ಸಂಸ್ಥೆ ತಯಾರಿಸಿರುವ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅನನ್ಯ ಪ್ರತಿಭೆಯನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಖಾಸಗಿ ವಲಯದ ವಿಸ್ತೃತ ಸಾಮರ್ಥ್ಯಗಳ ಬಗ್ಗೆ ತಿಳಿಸುತ್ತದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಚೊಚ್ಚಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವ; ಪ್ರಧಾನಿ ನರೇಂದ್ರ ಮೋದಿ ಸಂದೇಶ
September 05th, 11:00 am
ನನ್ನ ಆತ್ಮೀಯ ಸ್ನೇಹಿತರೇ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು. ಮೊದಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ಈ ಅದ್ಭುತ ಉಪಕ್ರಮಕ್ಕಾಗಿ ನಾನು ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟವನ್ನು ಅಭಿನಂದಿಸುತ್ತೇನೆ.