Our vision is to make the Indian Ocean an Ocean of Opportunity: PM Modi at the India-Seychelles Joint Press Meet
June 28th, 02:02 pm
Addressing the India-Seychelles Joint Press Meet, PM Modi dedicated the Guardian of the Blue Horizon honour to all nations fighting climate change. Reaffirming the MAHASAGAR Vision, he said India envisions an Indian Ocean where prosperity grows with maritime security and partnerships are rooted in mutual respect and trust. He also highlighted the Blue Economy as a natural and strategic pillar of the India-Seychelles partnership.Prime Minister pays homage to Dr. Syama Prasad Mookerjee on his Balidan Diwas, shares Sanskrit Subhashitam
June 23rd, 03:39 pm
PM Modi paid homage to Dr. Syama Prasad Mookerjee on his Balidan Diwas and remembered his immense contribution to nation-building, noting that his profound thoughts and ideals will continue to inspire every generation of the country. Sharing a Sanskrit Subhashitam, PM Modi also said that noble souls who renounce their personal interests for the sake of the nation, society and truth become immortal.India is not only a fast-growing economy, but also a credible one: PM Modi
June 22nd, 10:24 pm
Addressing the Republic Summit 2026, PM Modi highlighted how the spirit of “Nation First” has guided India’s achievements over the past decade. He said India is emerging as a fast-growing, credible and reliable global power and noted that Left Wing Extremism is breathing its last amid rapid development. He expressed confidence that the collective efforts of 140 crore Indians will realise the vision of a Viksit Bharat.PM Modi addresses the Republic Summit 2026
June 22nd, 08:00 pm
Addressing the Republic Summit 2026, PM Modi highlighted how the spirit of “Nation First” has guided India’s achievements over the past decade. He said India is emerging as a fast-growing, credible and reliable global power and noted that Left Wing Extremism is breathing its last amid rapid development. He expressed confidence that the collective efforts of 140 crore Indians will realise the vision of a Viksit Bharat.ಭಾರತ-ಫ್ರಾನ್ಸ್ ನಾವೀನ್ಯತೆ ನೀಲನಕ್ಷೆ 2030
June 15th, 05:42 am
2026ರ ಫೆಬ್ರವರಿ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ದ್ವಿಪಕ್ಷೀಯ ಸಂಬಂಧವನ್ನು ”ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ’ ಯ ಎತ್ತರಕ್ಕೆ ಏರಿಸಿದರು ಮತ್ತು ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಉಭಯ ನಾಯಕರು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಸಂಶೋಧನೆ, ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಸೈಬರ್ ಸ್ಪೇಸ್, ಆರೋಗ್ಯ, ಸಂಸ್ಕೃತಿ, ಆರ್ಥಿಕತೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ವಲಯಗಳಲ್ಲಿ ವಿಸ್ತೃತ ಮತ್ತು ವೈವಿಧ್ಯಮಯ ಸಹಕಾರಕ್ಕೆ ಕರೆ ನೀಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸತತ ಅವಧಿಗಳಿಗೆ ಅತ್ಯಂತ ದೀರ್ಘಕಾಲ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟದಿಂದ ನಿರ್ಣಯ ಅಂಗೀಕಾರ
June 10th, 01:50 pm
ಕೇಂದ್ರ ಸಚಿವ ಸಂಪುಟವು ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಜೂನ್ 10, 2026ರ ದಿನವನ್ನು ಭಾರತೀಯ ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿ ಗುರುತಿಸಲಾಗಿದ್ದು, ಶ್ರೀ ನರೇಂದ್ರ ಮೋದಿಯವರು ದೇಶದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಲಾಗಿದೆ. ಚುನಾಯಿತ ಪ್ರಧಾನಿಯಾಗಿ ಸತತ 4,399 ದಿನಗಳ ಕಾಲ ನಿರಂತರ ಸೇವೆ ಸಲ್ಲಿಸುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ಶ್ರೀ ಜವಾಹರಲಾಲ್ ನೆಹರೂ ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮೀರಿದ್ದಾರೆ. ನೆಹರೂ ಅವರು 1952 ರಿಂದ 1964 ರವರೆಗೆ ಸತತ 4,398 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭವು ಭಾರತದ ಪ್ರಜಾಪ್ರಭುತ್ವದ ಜಾಗೃತಿ, ಸಾರ್ವಜನಿಕರ ನಂಬಿಕೆ ಮತ್ತು ದೇಶದ ಜನರ ಭಾಗವಹಿಸುವಿಕೆಯ ಶಕ್ತಿಯ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು 'ರಾಷ್ಟ್ರ ಮೊದಲು' ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯುವ ನಾಯಕನಿಗೆ ದೇಶದ ಜನತೆ ನೀಡಿದ ಅಭೂತಪೂರ್ವ ಬೆಂಬಲವನ್ನು ತೋರಿಸುತ್ತದೆ.ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಅತ್ಯಂತ ದೊಡ್ಡ ಪರೀಕ್ಷೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಗಳಿಸುವ ಮಾರ್ಗ ಎಂಬುದನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
June 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಅತ್ಯಂತ ದೊಡ್ಡ ಪರೀಕ್ಷೆ ಎಂಬುದನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವೊಂದನ್ನು ಇಂದು ಹಂಚಿಕೊಂಡಿದ್ದಾರೆ. ನಮ್ರತೆ, ಸಮರ್ಪಣಾ ಭಾವ ಮತ್ತು ಕರ್ತವ್ಯ ನಿಷ್ಠೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಸಾರ್ವಜನಿಕರ ನಂಬಿಕೆಯನ್ನು ಗಳಿಸುತ್ತಾನೆ ಎಂದು ಪ್ರಧಾನಮಂತ್ರಿಯವರು ಉಲ್ಲೇಖಿಸಿದ್ದಾರೆ.ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ 12 ವರ್ಷಗಳ ಸರ್ಕಾರದ ಸಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 09th, 10:30 am
ಕಳೆದ 12 ವರ್ಷಗಳ ಸರ್ಕಾರವು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು 'ರಾಷ್ಟ್ರ ಮೊದಲು' ಎಂಬ ಮನೋಭಾವದಿಂದ, ಯುವಕರು, ಮಹಿಳೆಯರು ಮತ್ತು ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸುವಲ್ಲಿ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಎಂದು ಪ್ರಧಾನಿಯವರು ಹೇಳಿದರು.ಸಮಾಜದ ಕಲ್ಯಾಣಕ್ಕಾಗಿ ಸಮರ್ಪಿತವಾದ ನಿಜವಾದ ಬುದ್ಧಿವಂತ ವ್ಯಕ್ತಿಯ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
June 09th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಮಾಜದ ಕಲ್ಯಾಣಕ್ಕಾಗಿ ಸಮರ್ಪಿತವಾದ ನಿಜವಾದ ಬುದ್ಧಿವಂತ ವ್ಯಕ್ತಿಯ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ
June 04th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.Prime Minister pays tribute to Lokmata Ahilyabai Holkar on her birth anniversary
May 31st, 11:15 am
The Prime Minister, Shri Narendra Modi has paid tributes to Lokmata Ahilyabai Holkar on her birth anniversary.ಎನ್.ಟಿ.ಆರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 28th, 09:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್.ಟಿ.ಆರ್. ಗಾರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 15th, 02:41 pm
ಶ್ರೀ ಸಾಮ್ರಾಟ್ ಚೌಧರಿ ಅವರ ಶಕ್ತಿ, ಸಾರ್ವಜನಿಕ ಸೇವೆಗೆ ಬದ್ಧತೆ ಮತ್ತು ತಳಮಟ್ಟದ ಅನುಭವವು ರಾಜ್ಯಕ್ಕೆ ಅತ್ಯಂತ ಉಪಕಾರಿಯಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚೌಧರಿ ಅವರ ಸಮರ್ಥ ನಾಯಕತ್ವದಲ್ಲಿ ಬಿಹಾರವು ಜನರ ಆಕಾಂಕ್ಷೆಗಳನ್ನು ಈಡೇರಿಸುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ತಲುಪುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುವ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ಬುದ್ಧಿಶಕ್ತಿ ಮತ್ತು ಕೃತಕ ಬುದ್ಧಿಮತ್ತೆಯ ಗುಣಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
February 17th, 08:53 am
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಮಾಜಕ್ಕೆ ನಿಜವಾಗಿಯೂ ಉಪಯುಕ್ತವಾಗಿಸುವಲ್ಲಿ ಬುದ್ಧಿವಂತಿಕೆ, ತಾರ್ಕಿಕತೆ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯ ಮಹತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಬಗ್ಗೆ ಹೇಳಿರುವ ಪ್ರಧಾನಮಂತ್ರಿ ಅವರು, ಎಲ್ಲಾ ನಾಗರಿಕರ ಕಲ್ಯಾಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಅನ್ವೇಷಿಸುವುದು ಶೃಂಗಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.ನಾಗರಿಕ ದೇವೋಭವ ಚೈತನ್ಯದೊಂದಿಗೆ ಮಾರ್ಗದರ್ಶಿಸಲ್ಪಟ್ಟ 'ಸೇವಾ ತೀರ್ಥ' ಪ್ರಧಾನಮಂತ್ರಿಗಳಿಂದ ರಾಷ್ಟ್ರಕ್ಕೆ ಅರ್ಪಣೆ
February 13th, 05:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥವನ್ನು ರಾಷ್ಟ್ರಕ್ಕೆ ಅರ್ಪಿಸಿದರು ಮತ್ತು ಭಾರತದ ಜನರಿಗೆ ಸೇವೆ ಸಲ್ಲಿಸುವ ತಮ್ಮ ಅಚಲ ಸಂಕಲ್ಪವನ್ನು ಪುನರುಚ್ಚರಿಸುತ್ತಾ 'ನಾಗರಿಕ ದೇವೋ ಭವ' ಎಂಬ ಚೈತನ್ಯದಿಂದ ಇದು ಮಾರ್ಗದರ್ಶಿಸಲ್ಪಟ್ಟಿದೆ ಎಂದು ವಿವರಿಸಿದ್ದಾರೆ.ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 01st, 09:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ರವಿದಾಸ್ ಮಹಾರಾಜ್ ಅವರ ಚಿಂತನೆಗಳಲ್ಲಿ ನ್ಯಾಯ ಮತ್ತು ಕರುಣೆಯ ಅತ್ಯುನ್ನತವಾಗಿದ್ದು, ಅದುವೇ ನಮ್ಮ ಸಾರ್ವಜನಿಕ ಕಲ್ಯಾಣ ಯೋಜನೆಗಳ ಅತ್ಯಂತ ಮೂಲಾಧಾರವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. “ಅವರು ಪ್ರಜ್ವಲಿಸಿದ ಸಾಮಾಜಿಕ ಸೌಹಾರ್ದತೆ ಮತ್ತು ಸದುದ್ದೇಶದ ದೀಪವು ದೇಶದ ಜನರ ಹಾದಿಯನ್ನು ಸದಾ ಪ್ರಕಾಶಮಾನಗೊಳಿಸುತ್ತಲೇ ಇರುತ್ತದೆ,” ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.