ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
November 19th, 01:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 18th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಮಂತ್ರಿ
January 16th, 06:13 pm
ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ಸಲ್ಲಿಸಿದರು.ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಜುಲೈ 4 ರಂದು ಪುಟ್ಟಪರ್ತಿಯಲ್ಲಿ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟನೆ
July 03rd, 06:29 pm
ಶ್ರೀ ಸತ್ಯಸಾಯಿ ಸೆಂಟ್ರಲ್ ಟ್ರಸ್ಟ್ ಪುಟ್ಟಪರ್ತಿಯ ಪ್ರಶಾಂತಿ ನಿಲಯದಲ್ಲಿ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ನಿರ್ಮಿಸಿದೆ. ಪ್ರಶಾಂತಿ ನಿಲಯವು ಶ್ರೀ ಸತ್ಯಸಾಯಿ ಬಾಬಾರವರ ಮುಖ್ಯ ಆಶ್ರಮವಾಗಿದೆ.