ಇತ್ತೀಚಿನ ಕ್ಯೂ.ಎಸ್. ಏಷ್ಯಾ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಖ್ಯೆಯಲ್ಲಿ ದಾಖಲೆಯ ಹೆಚ್ಚಳವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
November 04th, 09:37 pm
ಕಳೆದ ದಶಕದಲ್ಲಿ ಕ್ಯೂ.ಎಸ್. ಏಷ್ಯಾ ವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಖ್ಯೆಯಲ್ಲಿ ದಾಖಲೆಯ ಹೆಚ್ಚಳವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಸಂಶೋಧನೆ ಮತ್ತು ನಾವೀನ್ಯತೆಯ ಮೇಲೆ ಗಮನ ಕೇಂದ್ರೀಕರಿಸಿ, ನಮ್ಮ ಯುವಜನರಿಗೆ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಭಾರತದಾದ್ಯಂತ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಸಕ್ರಿಯಗೊಳಿಸುವ ಮೂಲಕ ನಾವು ಈ ವಲಯದಲ್ಲಿ ಸಾಂಸ್ಥಿಕ ಸಾಮರ್ಥ್ಯಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಶ್ರೀ ಮೋದಿ ಹೇಳಿದ್ದಾರೆ.