ನವೆಂಬರ್ 3 ರಂದು ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 02nd, 09:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 3 ರಂದು ಬೆಳಗ್ಗೆ 9:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ಇ.ಎಸ್.ಟಿ.ಐ.ಸಿ) 2025 ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ
September 26th, 05:15 pm
ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು
September 26th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.