ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ
June 10th, 11:50 pm
ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷರು
June 03rd, 03:03 pm
ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.ನೇಪಾಳದ ಚುನಾವಣೆಯಲ್ಲಿ ಯಶಸ್ಸು ಸಾಧಿಸಿರುವ ರಾಷ್ಟ್ರೀಯ ಸ್ವತಂತ್ರ ಪಕ್ಷದ ನಾಯಕರಿಗೆ ಪ್ರಧಾನಮಂತ್ರಿ ಅಭಿನಂದನೆ
March 09th, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ (ಆರ್ ಎಸ್ ಪಿ) ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಮತ್ತು ಆರ್ ಎಸ್ ಪಿಯ ಹಿರಿಯ ನಾಯಕರಾದ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಆತ್ಮೀಯವಾದ ದೂರವಾಣಿ ಸಂಭಾಷಣೆ ನಡೆಸಿದರು.