ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಾರ್ಚ್ 14 ರಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಭೇಟಿ

March 12th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 14, 2026 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಕೋಲ್ಕತ್ತಾದಲ್ಲಿ ಸುಮಾರು ₹18,680 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

"ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ, ಸುಧಾರಣೆಗಳು ಮತ್ತು ಹಣಕಾಸು" ಎನ್ನುವ ವಿಷಯದ ಕುರಿತು ಬಜೆಟ್ ನಂತರದ ವೆಬಿನಾರಿನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 27th, 01:01 pm

ಈ ವರ್ಷದ ಮೊದಲ ಬಜೆಟ್ ವೆಬಿನಾರಿಗೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ. ಕಳೆದ ಕೆಲವು ವರ್ಷಗಳಿಂದ, ಬಜೆಟ್ ವೆಬಿನಾರ್ ಗಳು ಅಗತ್ಯವಾದ ಸಂಪ್ರದಾಯವಾಗಿ ಮಾರ್ಪಟ್ಟಿವೆ. ಆಗಾಗ್ಗೆ, ಬಜೆಟ್ ಅನ್ನು ವಿವಿಧ ನಿಯತಾಂಕಗಳ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ - ಕೆಲವೊಮ್ಮೆ ಷೇರು ಮಾರುಕಟ್ಟೆಯ ಪ್ರವೃತ್ತಿಯ ಬಗ್ಗೆ ಚರ್ಚಿಸುವುದು, ಕೆಲವೊಮ್ಮೆ ಆದಾಯ ತೆರಿಗೆ ಪ್ರಸ್ತಾಪಗಳ ಮೇಲೆ ಕೇಂದ್ರೀಕರಿಸುವುದು. ನಿಜವೇನೆಂದರೆ ದೇಶದ ಬಜೆಟ್ ಅಲ್ಪಾವಧಿಯ ವ್ಯಾಪಾರ ದಾಖಲೆಯಲ್ಲ; ಇದು ನೀತಿಯ ಮಾರ್ಗಸೂಚಿಯಾಗಿದೆ. ಆದ್ದರಿಂದ, ಬಜೆಟ್ ನ ಪರಿಣಾಮಕಾರಿತ್ವವನ್ನು ಗಟ್ಟಿಯಾದ ನಿಯತಾಂಕಗಳ ಮೇಲೆ ನಿರ್ಣಯಿಸಬೇಕು: ಮೂಲಸೌಕರ್ಯವನ್ನು ವಿಸ್ತರಿಸುವ, ಸಾಲದ ಹರಿವನ್ನು ಸುಗಮಗೊಳಿಸುವ, ವ್ಯವಹಾರ ಮಾಡುವ ಸುಲಭತೆಯನ್ನು ಹೆಚ್ಚಿಸುವ, ಆಡಳಿತದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಹಾಗು ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಅವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನೀತಿಗಳು. ಬಜೆಟ್ ನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಆರ್ಥಿಕತೆಗೆ ಶಾಶ್ವತ ಶಕ್ತಿಯನ್ನು ಒದಗಿಸುತ್ತವೆ ಮತ್ತು ಮುಖ್ಯವಾಗಿ, ಯಾವುದೇ ಬಜೆಟ್ ಅನ್ನು ಪ್ರತ್ಯೇಕವಾಗಿ ನೋಡಬಾರದು.

“ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ ಸುಧಾರಣೆಗಳು ಮತ್ತು ಹಣಕಾಸು” ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

February 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2026-27ರ ಸರಣಿಯ ಮೊದಲ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ವಿಕಸಿತ ಭಾರತಕ್ಕಾಗಿ ತಂತ್ರಜ್ಞಾನ ಸುಧಾರಣೆಗಳು ಮತ್ತು ಹಣಕಾಸು ಎಂಬ ವಿಷಯದ ಮೇಲೆ ಭಾಷಣವನ್ನು ಕೇಂದ್ರೀಕರಿಸಿದರು. ರಾಷ್ಟ್ರೀಯ ಬಜೆಟ್ ಅಲ್ಪಾವಧಿಯ ವ್ಯಾಪಾರ ದಾಖಲೆಗಿಂತ ನೀತಿ ಮಾರ್ಗಸೂಚಿಯಾಗಿದೆ ಎಂದು ಹೇಳಿದ ಶ್ರೀ ಮೋದಿ, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ಸಾಮೂಹಿಕ ಪ್ರಯತ್ನಕ್ಕೆ ಕರೆ ನೀಡಿದರು.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಆಗಸ್ಟ್ 25–26 ರಂದು ಗುಜರಾತ್ ಗೆ ಪ್ರಧಾನಮಂತ್ರಿ ಅವರ ಭೇಟಿ

August 24th, 01:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 - 26 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 25 ರಂದು ಸಂಜೆ 6 ಗಂಟೆಗೆ ಅಹಮದಾಬಾದ್ ನ ಖೋಡಲ್ಧಾಮ್ ಮೈದಾನದಲ್ಲಿ ಅವರು 5,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

48ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

June 25th, 09:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್‌ ಬ್ಲಾಕ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ತಡೆರಹಿತವಾಗಿ ಸಂಯೋಜಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನ ಉತ್ತೇಜಿಸುವ ಗುರಿ ಹೊಂದಿರುವ ಐಸಿಟಿ ಶಕ್ತ, ಬಹು ಮಾದರಿ ವೇದಿಕೆಯಾದ ಪ್ರಗತಿಯ 48ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ 46ನೇ ಪ್ರಗತಿ ಸಂವಾದ ಸಭೆ

April 30th, 08:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ “ಪ್ರಗತಿ”ಯ 46ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 06th, 02:00 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು

April 06th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಪುಣೆ ಮೆಟ್ರೋ ಹಂತ-1 ಯೋಜನೆಯನ್ನು ದಕ್ಷಿಣಕ್ಕೆ ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ 5.46 ಕಿಮೀ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ

August 16th, 09:35 pm

ಪುಣೆ ಮೆಟ್ರೋ ಹಂತ-1 ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಪುಣೆ ಮೆಟ್ರೋದ ಹಂತ-1 ಅನ್ನು ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ ವಿಸ್ತರಿಸಲು ಹಸಿರು ನಿಶಾನೆ ತೋರಿಸಿದೆ. ಈ ವಿಸ್ತರಣೆಯು 5.46 ಕಿಮೀ ವ್ಯಾಪಿಸಿದೆ ಮತ್ತು ಪುಣೆಯಲ್ಲಿ ಮೆಟ್ರೋ ಸಂಪರ್ಕವನ್ನು ಇನ್ನಷ್ಟು ಸುಧಾರಿಸುತ್ತದೆ, ನಗರದ ದಕ್ಷಿಣ ಭಾಗದಲ್ಲಿರುವ ನಿವಾಸಿಗಳಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ.

ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ

April 11th, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 11th, 12:00 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

Today’s projects are one more step towards Viksit West Bengal: PM Modi

March 09th, 04:10 pm

Prime Minister Narendra Modi addressed ‘Viksit Bharat Viksit West Bengal’ program in Siliguri, West Bengal. He inaugurated and dedicated to the nation multiple projects of rail and road sector worth more than Rs 4500 crores in West Bengal. Speaking on the occasion, the Prime Minister expressed happiness to be present in the beautiful land of tea. He called today’s projects another step towards Viksit West Bengal.

​​​​​​​ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

March 09th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ 4500 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ರೈಲು ಹಾಗೂ ರಸ್ತೆ ವಲಯದ ಅನೇಕ ಯೋಜನೆಗಳನ್ನು ಅವರು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.

ಬಿಹಾರದ ಬೇಗುಸರಾಯ್‌ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 02nd, 08:06 pm

ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್‌ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.

ಬಿಹಾರದ ಬಿಗುಸರಾಯ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

March 02nd, 04:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್‌ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.