ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.