ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 29th, 05:32 pm
ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 29th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಜುಲೈ 26-27ರಂದು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 25th, 10:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 26ರಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಟ್ಯುಟಿಕೋರಿನ್ ನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ 4800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.