ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಭಾಷಣ
September 02nd, 01:00 pm
ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಬಿಹಾರದ ನನ್ನ ಲಕ್ಷಾಂತರ ಸಹೋದರಿಯರೆ - ನಿಮ್ಮೆಲ್ಲರಿಗೂ ನನ್ನ ಗೌರವಯುತ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಉದ್ಘಾಟನೆ
September 02nd, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬಿಹಾರ ರಾಜ್ಯ ಜೀವಿಕ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಈ ಶುಭ ಮಂಗಳವಾರದಂದು, ಹೆಚ್ಚು ಭರವಸೆಯ ಉಪಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಮೂಲಕ ಹೊಸ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ಈ ಉಪಕ್ರಮವು ಜೀವಿಕ ನಿಧಿಯೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ಹಳ್ಳಿಗಳಾದ್ಯಂತ ಆರ್ಥಿಕ ಸಹಾಯವನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಡುತ್ತದೆ, ಮತ್ತು ಅವರ ಕೆಲಸ ಹಾಗೂ ವ್ಯವಹಾರಗಳನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಜೀವಿಕ ನಿಧಿ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ದೈಹಿಕ ಭೇಟಿಯ ಅಗತ್ಯತೆ ನಿವಾರಿಸುತ್ತದೆ - ಈಗ ಎಲ್ಲ ಕೆಲಸಗಳನ್ನು ಮೊಬೈಲ್ ಫೋನ್ ಮೂಲಕ ಮಾಡಬಹುದು ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಆರಂಭಕ್ಕಾಗಿ ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರನ್ನು ಅಭಿನಂದಿಸಿದರು ಮತ್ತು ಈ ಮಹತ್ವದ ಉಪಕ್ರಮಕ್ಕಾಗಿ ಶ್ರೀ ನಿತೀಶ್ ಕುಮಾರ್ ಮತ್ತು ಬಿಹಾರ ಸರ್ಕಾರವನ್ನು ಅವರು ಶ್ಲಾಘಿಸಿದರು.PM expresses condolences on the passing away of Rajyogini Dadi Janki Ji
March 27th, 02:03 pm
The Prime Minister, Shri Narendra Modi has expressesed condolences on the passing away of Rajyogini Dadi Janki Ji, the Chief of Brahma Kumaris.