ರಾಮನವಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ ಮತ್ತು ರಾಮೇಶ್ವರಂ ಅನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ
April 04th, 02:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 6ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ರಾಮನವಮಿಯ ಸಂದರ್ಭದಲ್ಲಿ, ಮಧ್ಯಾಹ್ನ 12 ಗಂಟೆಗೆ, ಅವರು ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ - ಭಾರತದ ಮೊದಲ ಲಂಬ ಲಿಫ್ಟ್ ಸಮುದ್ರ ಸೇತುವೆ ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ.ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ರಾಮಸೇತುವಿನ ಆರಂಭ ಸ್ಥಳ "ಅರಿಚಲ್ ಮುನೈ"ಗೆ ಭೇಟಿ ನೀಡಿದ ಪ್ರಧಾನಮಂತ್ರಿ
January 21st, 03:42 pm
ರಾಮಸೇತುವಿನ ಆರಂಭದ ಸ್ಥಳವಾದ ಅರಿಚಲ್ ಮುನೈಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.