PM Modi addresses an enthusiastic public rally in Madurai, Tamil Nadu
March 01st, 04:30 pm
PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 26th, 08:16 pm
ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
July 26th, 07:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ
January 18th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.