ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 24th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನಾಚರಣೆಯ ಪ್ರಯುಕ್ತ 2025ರ ಡಿಸೆಂಬರ್ 25 ರಂದು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಪ್ರಧಾನಮಂತ್ರಿ ಅವರು ʻರಾಷ್ಟ್ರ ಪ್ರೇರಣಾ ಸ್ಥಳʼವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.