ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
January 26th, 05:25 pm
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
January 26th, 03:37 pm
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು.