ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಭಗವಾನ್ ಜಗನ್ನಾಥನ ರಥಯಾತ್ರೆಯ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
June 27th, 09:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಶುಭ ಕೋರಿದರು.ಮಹಾಪ್ರಭು ಜಗನ್ನಾಥನ ರಥಯಾತ್ರೆ ಪ್ರಧಾನ ಮಂತ್ರಿಗಳಿಂದ ಶುಭಾಶಯ
July 07th, 08:31 am
ಮಹಾಪ್ರಭು ಜಗನ್ನಾಥನ ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ
May 20th, 10:00 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು
May 20th, 09:58 am
ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.ಒಡಿಶಾದಲ್ಲಿ, ಒಡಿಯಾ ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ರಾಜ್ಯ ಬಿಜೆಪಿ ಬದ್ಧವಾಗಿದೆ: ಕಂಧಮಾಲ್‌ನಲ್ಲಿ ಪ್ರಧಾನಿ ಮೋದಿ
May 11th, 10:40 am
ಒಡಿಶಾದ ಕಂಧಮಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮನದೊಂದಿಗೆ ಅದ್ಧೂರಿ ಆಚರಣೆಗೆ ಸಾಕ್ಷಿಯಾಯಿತು. ರಾಜ್ಯದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮುನ್ನ ಸಭಿಕರನ್ನು ಪ್ರೀತಿಯಿಂದ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಒಡಿಶಾ ರಾಜ್ಯದ ಬಗ್ಗೆ ಅಪಾರ ಹೆಮ್ಮೆ ಮತ್ತು ರಾಷ್ಟ್ರಕ್ಕೆ ಅದರ ಅಮೂಲ್ಯ ಕೊಡುಗೆಯನ್ನು ವ್ಯಕ್ತಪಡಿಸಿದರು.ಒಡಿಶಾದ ಕಂಧಮಾಲ್, ಬಲಂಗೀರ್ ಮತ್ತು ಬರ್ಗಢದಲ್ಲಿ ಬೃಹತ್ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣಗಳನ್ನು ಮಾಡಿದರು
May 11th, 10:30 am
ಒಡಿಶಾದ ಕಂಧಮಾಲ್, ಬಲಂಗೀರ್ ಮತ್ತು ಬರ್ಗಢ್, ಪ್ರಧಾನಿ ನರೇಂದ್ರ ಮೋದಿಯವರ ಆಗಮನದೊಂದಿಗೆ ಭವ್ಯವಾದ ಆಚರಣೆಗಳಿಗೆ ಸಾಕ್ಷಿಯಾಯಿತು. ರಾಜ್ಯದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮುನ್ನ ಸಭಿಕರನ್ನು ಪ್ರೀತಿಯಿಂದ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಒಡಿಶಾ ರಾಜ್ಯದ ಬಗ್ಗೆ ಅಪಾರ ಹೆಮ್ಮೆ ಮತ್ತು ರಾಷ್ಟ್ರಕ್ಕೆ ಅದರ ಅಮೂಲ್ಯ ಕೊಡುಗೆಯನ್ನು ವ್ಯಕ್ತಪಡಿಸಿದರು.ಕುಮಾರ್ ಘಾಟ್ ನಲ್ಲಿ ಉಲ್ಟಾ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಅವಘಡಕ್ಕೆ ಪ್ರಧಾನಮಂತ್ರಿ ತೀವ್ರ ದುಃಖ
June 28th, 09:13 pm
ತ್ರಿಪುರಾದ ಕುಮಾರ್ ಘಾಟ್ ನಲ್ಲಿ ಉಲ್ಟಾ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಧನವನ್ನು ಶ್ರೀ ಮೋದಿ ಘೋಷಿಸಿದ್ದಾರೆ.ರಥ ಯಾತ್ರೆ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಕೋರಿದ ಪ್ರಧಾನಿ ಮೋದಿ
June 20th, 08:58 am
ನವದೆಹಲಿ ಜೂನ್ 20: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಥ ಯಾತ್ರೆಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.ರಥಯಾತ್ರೆ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ
July 01st, 10:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಥಯಾತ್ರೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಇತ್ತೀಚಿನ ಮನ್ ಕಿ ಬಾತ್ ನಿಂದ ಭಾರತೀಯ ಸಂಸ್ಕೃತಿಯಲ್ಲಿ ಯಾತ್ರೆಯ ಪ್ರಾಮುಖ್ಯತೆಯ ಬಗ್ಗೆ ತಮ್ಮ ಅಭಿಪ್ರಾಯಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ.ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
June 26th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.ವಸತಿ, ಎಲ್‌ಪಿಜಿ ಸಂಪರ್ಕಗಳು ಮತ್ತು ರೈತರ ಬೆಂಬಲದಂತಹ ಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಮುಂದುವರಿಯಲು, ಡಬಲ್ ಎಂಜಿನ್ ಸರ್ಕಾರ್ ಅಧಿಕಾರದಲ್ಲಿ ಉಳಿಯುವುದು ಅತ್ಯಗತ್ಯ: ಪ್ರಧಾನಿ ಮೋದಿ
February 12th, 03:51 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಕನೌಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರಪ್ರದೇಶ ಜನತೆಗೆ ಶುಭ ಹಾರೈಸುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದ ಅವರು, ನೀವೆಲ್ಲರೂ ಅಭಿವೃದ್ಧಿಯತ್ತ ಸಾಗಲಿ, ನಿರಂತರ ಅಭಿವೃದ್ಧಿಯಾಗಲಿ, ಪ್ರತಿಯೊಬ್ಬ ವ್ಯಾಪಾರಿಯ ವ್ಯಾಪಾರ ಮತ್ತಷ್ಟು ಬೆಳೆಯಲಿ ಮತ್ತು ಈ ಆಸೆ ಮತ್ತು ನಂಬಿಕೆಯಿಂದ ಇಂದು ನಾನು ಇಲ್ಲಿಗೆ ಬಂದಿದ್ದೇನೆ. ]ಉತ್ತರ ಪ್ರದೇಶದ ಕನೌಜ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 12th, 03:50 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಕನೌಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉತ್ತರಪ್ರದೇಶ ಜನತೆಗೆ ಶುಭ ಹಾರೈಸುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದ ಅವರು, ನೀವೆಲ್ಲರೂ ಅಭಿವೃದ್ಧಿಯತ್ತ ಸಾಗಲಿ, ನಿರಂತರ ಅಭಿವೃದ್ಧಿಯಾಗಲಿ, ಪ್ರತಿಯೊಬ್ಬ ವ್ಯಾಪಾರಿಯ ವ್ಯಾಪಾರ ಮತ್ತಷ್ಟು ಬೆಳೆಯಲಿ ಮತ್ತು ಈ ಆಸೆ ಮತ್ತು ನಂಬಿಕೆಯಿಂದ ಇಂದು ನಾನು ಇಲ್ಲಿಗೆ ಬಂದಿದ್ದೇನೆ. ]ಜಗನ್ನಾಥ ರಥಯಾತ್ರೆ; ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
July 12th, 09:50 am
ಒಡಿಶಾದ ಪುರಿಯಲ್ಲಿಂದು ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.PM greets people on the occasion of Rath Yatra
June 23rd, 10:57 am
The Prime Minister, Shri Narendra Modi has greeted the people on the occasion of the Rath Yatra.ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ ಪ್ರಧಾನಿ
July 04th, 04:16 pm
ಪುರಿ ಜಗನ್ನಾಥ ರಥಯಾತ್ರೆಯ ಪವಿತ್ರ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಶ್ರೀ. ನರೇಂದ್ರ ಮೋದಿ ಶುಭ ಕೋರಿದ್ದಾರೆ.ರಥ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ಜನರಿಗೆ ಶುಭಾಶಯ ನೀಡಿದರು
July 14th, 11:20 am
ರಾಷ್ಟ್ರದಾದ್ಯಂತ ಜನರಿಗೆ ರಥ ಯಾತ್ರೆಯ ಸಂದರ್ಭದಲ್ಲಿ ಅವರ ಶುಭಾಶಯಗಳನ್ನು ನೀಡುತ್ತಾ , ಜಗನ್ನಾಥ್ ಆಶೀರ್ವಾದದಿಂದಾಗಿ, ನಮ್ಮ ದೇಶವು ಹೊಸ ಎತ್ತರವನ್ನು ಅಳೆಯಬಹುದು , ಪ್ರತಿ ಭಾರತೀಯೂ ಖುಷಿ ಮತ್ತು ಶ್ರೀಮಂತರಾಗಿರಲಿ ಜೈ ಜಗನ್ನಾಥ್!ಸಾಮಾಜಿಕ ಮಾಧ್ಯಮ ಕಾರ್ನರ್ 26 ಜೂನ್ 2017
June 26th, 07:41 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !