ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.ಸವಾಲಿನ ಜಾಗತಿಕ ಪರಿಸರದಲ್ಲಿ ಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುವ ಭಾರತದ ಸುಧಾರಣಾ ಎಕ್ಸ್‌ಪ್ರೆಸ್‌ನ ಸಮಗ್ರ ಚಿತ್ರಣ ಆರ್ಥಿಕ ಸಮೀಕ್ಷೆಯನ್ನು ಪ್ರಧಾನಮಂತ್ರಿ ಬಿಂಬಿಸಿದರು
January 29th, 08:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಂಡಿಸಲಾದ ಆರ್ಥಿಕ ಸಮೀಕ್ಷೆಯು ಭಾರತದ ಸುಧಾರಣಾ ಎಕ್ಸ್‌ಪ್ರೆಸ್‌ನ ಸಮಗ್ರ ಚಿತ್ರಣವನ್ನು ಪ್ರಸ್ತುತಪಡಿಸುತ್ತದೆ. ಇದು ಸವಾಲಿನ ಜಾಗತಿಕ ಪರಿಸರದಲ್ಲಿಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಆರ್ಥಿಕ ಸಮೀಕ್ಷೆಯು ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸುಸ್ಥಿರ ಬೆಳವಣಿಗೆಯ ವೇಗ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ನಾವೀನ್ಯತೆ, ಉದ್ಯಮಶೀಲತೆ ಮತ್ತು ಮೂಲಸೌಕರ್ಯಗಳ ವಿಸ್ತರಿಸುತ್ತಿರುವ ಪಾತ್ರವನ್ನು ಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ‘‘ರೈತರು, ಎಂಎಸ್‌ಎಂಇಗಳು, ಯುವ ಉದ್ಯೋಗ ಮತ್ತು ಸಮಾಜ ಕಲ್ಯಾಣದ ಮೇಲೆ ಕೇಂದ್ರೀಕೃತ ಗಮನದೊಂದಿಗೆ ಅಂತರ್ಗತ ಅಭಿವೃದ್ಧಿಯ ಮಹತ್ವವನ್ನು ಸಮೀಕ್ಷೆಯು ಒತ್ತಿಹೇಳುತ್ತದೆ. ಇದು ಉತ್ಪಾದನೆಯನ್ನು ಬಲಪಡಿಸಲು, ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ವಿಕಸಿತ ಭಾರತವಾಗುವತ್ತ ನಮ್ಮ ಹೆಜ್ಜೆಯನ್ನು ವೇಗಗೊಳಿಸಲು ಮಾರ್ಗಸೂಚಿಯನ್ನು ಸಹ ವಿವರಿಸುತ್ತದೆ,’’ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಅವರು ಮಾಡಿದ ಸ್ಪೂರ್ತಿದಾಯಕ ಭಾಷಣದೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಯಿತು: ಪ್ರಧಾನಮಂತ್ರಿ
January 28th, 11:00 am
ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದಲ್ಲಿ ಉಭಯ ಸದನಗಳನ್ನುದ್ದೇಶಿಸಿ ಮಾಡಿದ ರಾಷ್ಟ್ರಪತಿಗಳ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. “ಇಂದಿನ ಭಾಷಣವು ಸಮಗ್ರ ಮತ್ತು ಒಳನೋಟವುಳ್ಳದ್ದಾಗಿತ್ತು. ಇದು ಭವಿಷ್ಯಕ್ಕಾಗಿ ಸ್ಪಷ್ಟ ನಿರ್ದೇಶನವನ್ನು ಉಲ್ಲೇಖಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಭಾರತದ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ..ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 24th, 11:30 am
2026ರ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಹೊಸ ಸಂತೋಷಗಳ ಆರಂಭ ಸೂಚಿಸುತ್ತದೆ. ಇದರೊಂದಿಗೆ ವಸಂತ ಪಂಚಮಿ ನಿನ್ನೆಯಷ್ಟೇ ಕಳೆದಂತೆ, ನಿಮ್ಮ ಜೀವನದಲ್ಲಿ ಹೊಸ ವಸಂತವೂ ಪ್ರಾರಂಭವಾಗುತ್ತಿದೆ. ಈ ಸಮಯವು ನಿಮ್ಮನ್ನು ಸಂವಿಧಾನದ ಕಡೆಗೆ ನಿಮ್ಮ ಕರ್ತವ್ಯಗಳೊಂದಿಗೆ ಸಂಪರ್ಕಿಸುತ್ತಿದೆ. ಕಾಕತಾಳೀಯವಾಗಿ, ದೇಶದಲ್ಲಿ ಪ್ರಸ್ತುತ ಗಣರಾಜ್ಯದ ಭವ್ಯ ಹಬ್ಬ ನಡೆಯುತ್ತಿದೆ. ನಿನ್ನೆ ಜನವರಿ 23ರಂದು ನಾವು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ ಆಚರಿಸಿದ್ದೇವೆ. ಈಗ ನಾಳೆ ಜನವರಿ 25ರಂದು, ರಾಷ್ಟ್ರೀಯ ಮತದಾರರ ದಿನ, ನಂತರ ಜನವರಿ 26ರಂದು ಗಣರಾಜ್ಯೋತ್ಸವ. ಇಂದು ವಿಶೇಷ ದಿನವೂ ಆಗಿದೆ. ಈ ದಿನದಂದು ನಮ್ಮ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿದೆ. ಇಂದು ಈ ಮಹತ್ವದ ದಿನದಂದು, 61 ಸಾವಿರಕ್ಕೂ ಹೆಚ್ಚು ಯುವಕರು ಜೀವನದಲ್ಲಿ ಹೊಸ ಆರಂಭ ಮಾಡುತ್ತಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ 'ಉದ್ಯೋಗ ಮೇಳ'ವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು
January 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 18ನೇ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು 2026ನೇ ವರ್ಷವು ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಮೂಲಕ ಮತ್ತು ಇದೇವೇಳೆ, ನಾಗರಿಕರನ್ನು ಅವರ ಸಾಂವಿಧಾನಿಕ ಕರ್ತವ್ಯಗಳೊಂದಿಗೆ ಸಂಪರ್ಕಿಸುವ ಮೂಲಕ ಪ್ರಾರಂಭವಾಗಿದೆ ಎಂದು ಹೇಳಿದರು. ಈ ಅವಧಿಯು ಭವ್ಯ ಗಣರಾಜ್ಯೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರವು 'ಪರಾಕ್ರಮ್ ದಿವಸ್' ಅನ್ನು ಆಚರಿಸಿತು ಮತ್ತು ನಾಳೆ, ಜನವರಿ 25 ರಂದು 'ರಾಷ್ಟ್ರೀಯ ಮತದಾರರ ದಿನ' ಮತ್ತು ಮರುದಿನ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಶ್ರೀ ಮೋದಿ ಸ್ಮರಿಸಿದರು. ಇಂದು ವಿಶೇಷವಾಗಿದೆ, ಏಕೆಂದರೆ ಇದೇ ದಿನ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಈ ಮಹತ್ವದ ದಿನದಂದು, ಅರವತ್ತೊಂದು ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುವ ಮೂಲಕ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಈ ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣಕ್ಕೆ ಆಹ್ವಾನ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ವೇಗಗೊಳಿಸುವ ಸಂಕಲ್ಪ ಎಂದು ಶ್ರೀ ಮೋದಿ ಬಣ್ಣಿಸಿದರು. ಅನೇಕ ಯುವಕರು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುತ್ತಾರೆ, ಶಿಕ್ಷಣ ಮತ್ತು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಸಶಕ್ತಗೊಳಿಸುತ್ತಾರೆ, ಹಣಕಾಸು ಸೇವೆಗಳು ಮತ್ತು ಇಂಧನ ಭದ್ರತೆಯನ್ನು ಬಲಪಡಿಸುತ್ತಾರೆ ಜೊತೆಗೆ, ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಯುವಜನರಿಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ಸಮೃದ್ಧ ಭಾರತಕ್ಕಾಗಿ ಸಮಗ್ರ ಸುಧಾರಣೆಗಳ ಬಗ್ಗೆ ಪ್ರಧಾನಮಂತ್ರಿ ಅವರು ಮಹತ್ವಪೂರ್ಣವಾಗಿ ಹೇಳಿದರು
January 07th, 10:00 pm
ಸರ್ಕಾರದ ಸಮಗ್ರ ಹೂಡಿಕೆ ಉತ್ತೇಜನ ಮತ್ತು ಬೇಡಿಕೆ-ನೇತೃತ್ವದ ನೀತಿಗಳಿಂದ ನಡೆಸಲ್ಪಡುವ ಭಾರತದ ಸುಧಾರಣಾ ಎಕ್ಸ್‌ಪ್ರೆಸ್ ವೇಗಗತಿಯನ್ನು ಪಡೆಯುತ್ತಲೇ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುನರುಚ್ಚರಿಸಿದರು.