ನೇಪಾಳ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
August 26th, 06:02 pm
ನೇಪಾಳದಲ್ಲಿ ಪ್ರವಾಹ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರಧಾನಮಂತ್ರಿ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.ಹರಿಯಾಣದ ನೂಹ್‌ನಲ್ಲಿ ಆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ
April 26th, 07:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ನೂಹ್‌ನಲ್ಲಿ ಆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣೆಗಾಗಿ ರಾಜ್ಯ ಸರ್ಕಾರವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.ಕೇರಳದ ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
August 10th, 07:40 pm
ಈ ದುರಂತದ ಬಗ್ಗೆ ನಾನು ಮೊದಲು ತಿಳಿದಾಗಿನಿಂದ, ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಎಲ್ಲಾ ಸಂಬಂಧಿತ ಇಲಾಖೆಗಳನ್ನು ವಿಳಂಬವಿಲ್ಲದೆ ಸಜ್ಜುಗೊಳಿಸುವುದು ಕಡ್ಡಾಯವಾಗಿದೆ ಮತ್ತು ಈ ದುರಂತ ಘಟನೆಯಿಂದ ಬಾಧಿತರಾದವರನ್ನು ಬೆಂಬಲಿಸುವ ನಮ್ಮ ಪ್ರಯತ್ನಗಳಲ್ಲಿ ನಾವು ಒಂದಾಗಿದ್ದೇವೆ.ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ, ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ
August 10th, 07:36 pm
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಬಾಧಿತರಾದವರಿಗೆ ನಮ್ಮ ಪ್ರಾರ್ಥನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ಮತ್ತು ಎಲ್ಲಾ ನೆರವನ್ನು ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಇಂದು ಕೇರಳದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಭೂಕುಸಿತದಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.