ಗ್ರೀಸ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರೊಂದಿಗೆ ಪ್ರಧಾನಮಂತ್ರಿ ಚರ್ಚೆ

February 19th, 07:15 pm

ಫೆಬ್ರವರಿ 18 ರಿಂದ 19 ರವರೆಗೆ ನವದೆಹಲಿಯಲ್ಲಿ ನಡೆದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ, 2026ರಲ್ಲಿ ಭಾಗವಹಿಸಲು ಹೆಲೆನಿಕ್ ರಿಪಬ್ಲಿಕ್ ಆಫ್‌ ಪ್ರಧಾನಮಂತ್ರಿ ಶ್ರೀ ಕಿರಿಯಾಕೋಸ್ ಮಿಟ್ಸೋಟಾಕಿಸ್ ಭಾರತಕ್ಕೆ ಆಗಮಿಸಿದ್ದಾರೆ

AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರೊಂದಿಗೆ ಪ್ರಧಾನಮಂತ್ರಿ ಅವರ ಭೇಟಿ

February 18th, 05:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 18, 2026 ರಂದು ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರನ್ನು ಭೇಟಿ ಮಾಡಿದರು.

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಫೆಬ್ರವರಿ 17 ರಂದು ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷರಾದ​​​​​​​ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿರುವ ಪ್ರಧಾನಮಂತ್ರಿ

February 16th, 09:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 17 ರಂದು ಮುಂಬೈಗೆ ಪ್ರಯಾಣಿಸಲಿದ್ದು, ಅಲ್ಲಿ ಅವರು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.