ಆಸ್ಟ್ರೇಲಿಯಾದ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿದರು

June 04th, 04:52 pm

ಆಸ್ಟ್ರೇಲಿಯಾದ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವ ಗೌರವಾನ್ವಿತ ರಿಚರ್ಡ್ ಮಾರ್ಲ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇತ್ತೀಚಿನ ಫೆಡರಲ್ ಚುನಾವಣೆಗಳಲ್ಲಿ ಆಸ್ಟ್ರೇಲಿಯಾದ ಲೇಬರ್ ಪಕ್ಷದ ಐತಿಹಾಸಿಕ ವಿಜಯಕ್ಕಾಗಿ ಉಪ ಪ್ರಧಾನಿ ಮಾರ್ಲೆಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.