ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 12th, 02:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಪ್ರಯಾಗ್‌ರಾಜ್‌ನಲ್ಲಿ 5,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.