80ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ವಿಕಸಿತ ಭಾರತದತ್ತ ಭಾರತದ ಮುಂದಿನ ದಾಪುಗಾಲು ಹಾಕಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ಪಷ್ಟ ಕರೆ
August 15th, 12:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ತಮ್ಮ 80 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, 2047ರ ವೇಳೆಗೆ ವಿಕಸಿತ ಭಾರತದತ್ತ ಭಾರತದ ಪ್ರಯಾಣವನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹಲವಾರು ಸ್ಪಷ್ಟ ಕರೆಗಳನ್ನು ನೀಡಿದರು. ದೇಶದ ಕೆಲಸದ ಸಂಸ್ಕೃತಿ, ಚಿಂತನೆ ಮತ್ತು ಮಹತ್ವಾಕಾಂಕ್ಷೆಯ ಪ್ರಮಾಣದಲ್ಲಿ ಬದಲಾವಣೆಗೆ ಕರೆ ನೀಡಿದ ಪ್ರಧಾನಮಂತ್ರಿಯವರು, ನಾಗರಿಕರು, ಸರ್ಕಾರಗಳು, ಉದ್ಯಮ, ರೈತರು, ಯುವಜನರು ಮತ್ತು ಸಮಾಜದ ಇತರ ವರ್ಗಗಳ ಸಾಮೂಹಿಕ ಕ್ರಮದ ಅಗತ್ಯವನ್ನು ಒತ್ತಿ ಹೇಳಿದರು.80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 15th, 07:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 06:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ
August 15th, 06:45 am
80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಒಎಸ್‌ಎಟಿ ಸೌಲಭ್ಯ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 05:15 pm
2024ರಲ್ಲಿ ಈ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ನನಗೆ ಸಿಕ್ಕಿತ್ತು. 2025 ಆಗಸ್ಟ್ ಹೊತ್ತಿಗೆ ಚಿಪ್ ಪರೀಕ್ಷಾ ಕಾರ್ಯ ಇಲ್ಲಿ ಪ್ರಾರಂಭವಾಯಿತು, ಇಂದು ಈ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಶಂಕುಸ್ಥಾಪನೆಯಿಂದ ಹಿಡಿದು ಉತ್ಪಾದನೆಯ ತನಕದ ಪ್ರಯಾಣವು ನಿಸ್ಸಂದೇಹವಾಗಿ ಅನೇಕ ಸಹೋದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಸುಬ್ಬಯ್ಯ ಜಿ ಅವರಂತಹ ನಾಯಕರ ಫಲವಾಗಿದೆ. ವೇದಿಕೆಗೆ ಬರುವ ಮೊದಲು, ಈ ಯೋಜನೆಗೆ ಸಂಬಂಧಿಸಿದ ಅನೇಕರೊಂದಿಗೆ ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿತು. ಈ ಕ್ಯಾಂಪಸ್‌ನಲ್ಲಿ ಒಂದು ಮಿನಿ ಭಾರತ ವಾಸಿಸುತ್ತಿದೆ ಎಂದು ಭಾಸವಾಯಿತು - ಎಲ್ಲಾ ಭಾಷೆ, ಉಡುಪು ಮತ್ತು ಪಾಕ ಪದ್ಧತಿಯ ಜನರು ಇಲ್ಲಿದ್ದಾರೆ. ನನ್ನ ಪ್ರದರ್ಶನ ಭೇಟಿಯ ಸಮಯದಲ್ಲಿ ನಾನು ಅನೇಕ ಯುವಕ-ಯುವತಿಯರೊಂದಿಗೆ ಮಾತನಾಡಿದೆ. ನಾನು ಹೆಮ್ಮೆಯಿಂದ ಉಲ್ಲೇಖಿಸಬೇಕಾದ ಒಂದು ವಿಷಯವೆಂದರೆ, ಅವರ ಆತ್ಮವಿಶ್ವಾಸದ ಮಟ್ಟ. ಅವರು ಮಾತನಾಡಿದ ದೃಢನಿಶ್ಚಯ, ತಂತ್ರಜ್ಞಾನದ ಮೇಲಿನ ಅವರ ನಂಬಿಕೆ – ಇದರಿಂದ ನಾನು ನಿಜವಾಗಿಯೂ ಪ್ರಭಾವಿತನಾದೆ.ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (ಒಎಸ್‌ಎಟಿ) ಸೌಲಭ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
July 04th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸನಂದ್‌ನಲ್ಲಿ CG ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯವನ್ನು ಉದ್ಘಾಟಿಸಿದರು. ಈ ಸಂದರ್ಭದ ಮಹತ್ವವನ್ನು ವಿವರಿಸಿದ, ಪ್ರಧಾನಮಂತ್ರಿಯವರು ಈ ಉಡಾವಣೆಯನ್ನು ರಾಷ್ಟ್ರವು ತನ್ನ ಗುರಿಗಳಿಗೆ ಹೊಂದಿರುವ ಅಚಲ ಬದ್ಧತೆಗೆ ಸಾಕ್ಷಿಯಾಗಿ ರೂಪಿಸಿದರು. ದೇಶವು ತನ್ನ ಬಲವಾದ ನಿರ್ಣಯಗಳನ್ನು ಹಿಂಜರಿಕೆಯಿಲ್ಲದೆ ನಿರಂತರವಾಗಿ ಸ್ಪಷ್ಟ ವಾಸ್ತವಗಳಾಗಿ ಪರಿವರ್ತಿಸುತ್ತದೆ ಎಂದು ಅವರು ಹೇಳಿದರು. ಭಾರತವು ಏನು ಮಾಡಲು ನಿರ್ಧರಿಸಿದರೂ ಅದು ದೃಢವಾಗಿ ಸಾಧಿಸುತ್ತದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಪುರಾವೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು
May 18th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 12th, 06:45 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು
January 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 26th, 01:30 pm
ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು
December 26th, 01:00 pm
ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 19th, 08:11 pm
ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು
December 19th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.ಸೆಪ್ಟೆಂಬರ್ 2ರಂದು ನವದೆಹಲಿಯ ಯಶೋಭೂಮಿಯಲ್ಲಿ 'ಸೆಮಿಕಾನ್ ಇಂಡಿಯಾ - 2025' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 01st, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಯಶೋಭೂಮಿಯಲ್ಲಿ ಭಾರತದ ಅರೆವಾಹಕ ಪರಿಸರ ವ್ಯವಸ್ಥೆಯನ್ನು ವೇಗವರ್ಧಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ - 2025' ಅನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 3ರಂದು ಬೆಳಗ್ಗೆ 9:30ರಿಂದ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಇದರಲ್ಲಿ ಅವರು ಸಿಇಒಗಳ ದುಂಡುಮೇಜಿನ ಸಭೆಯಲ್ಲೂ ಭಾಗವಹಿಸಲಿದ್ದಾರೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
February 10th, 11:30 am
ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.