ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
October 24th, 11:20 am
ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
October 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಅವರಿಂದ ರೋಜ್ ಗಾರ್ ಮೇಳದಡಿ ಜುಲೈ 12 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಅಧಿಕ ನೇಮಕಾತಿ ಪತ್ರಗಳ ವಿತರಣೆ
July 11th, 11:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ 12 ರಂದು ಬೆಳಿಗ್ಗೆ 11:00 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಹೊಸದಾಗಿ ನೇಮಕಗೊಂಡಿರುವವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ರೋಜ್ ಗಾರ್ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ಏಪ್ರಿಲ್ 26 ರಂದು ಪ್ರಧಾನಮಂತ್ರಿಗಳಿಂದ ನೇಮಕಾತಿ ಪತ್ರಗಳ ವಿತರಣೆ
April 25th, 07:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ 2025ರ ಏಪ್ರಿಲ್ 26ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮಾರ್ಚ್ 7-8 ರಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗುಜರಾತ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ
March 07th, 07:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 7 - 8 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾರ್ಚ್ 7 ರಂದು ಸಿಲ್ವಾಸ್ಸಾಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಮೋ ಆಸ್ಪತ್ರೆಯನ್ನು (I ಹಂತ) ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ರ ಸುಮಾರಿಗೆ, ಅವರು ಸಿಲ್ವಾಸ್ಸಾದಲ್ಲಿ 2580 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕೇಂದ್ರಾಡಳಿತ ಪ್ರದೇಶಕ್ಕಾಗಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಸೂರತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5 ಗಂಟೆಗೆ ಅವರು ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 8 ರಂದು, ಪ್ರಧಾನ ಮಂತ್ರಿ ನವಸಾರಿಗೆ ಪ್ರಯಾಣಿಸಲಿದ್ದಾರೆ ಮತ್ತು ಸುಮಾರು 11:30ಕ್ಕೆ, ಅವರು ಲಕ್ಷಪತಿ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ವಿವಿಧ ಯೋಜನೆಗಳ ಉದ್ಘಾಟನೆಯನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ
December 22nd, 09:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 29th, 11:00 am
ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
October 29th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ."ಉದ್ಯೋಗ ಮೇಳ (ರೋಜ್‌ಗಾರ್ ಮೇಳ)" ಯೋಜನೆಯಡಿಯಲ್ಲಿ, ಅಕ್ಟೋಬರ್ 29, 2024 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ
October 28th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 29 ಅಕ್ಟೋಬರ್, 2024 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಸಮಾವೇಶ ಮೂಲಕ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯುವಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಭಾರತದ ಜನರನ್ನು ಲೂಟಿ ಮಾಡಲು 'ಪಿತ್ರಾರ್ಜಿತ ತೆರಿಗೆ' ಹೇರುವುದು ಕಾಂಗ್ರೆಸ್‌ನ ಶೆಹಜಾದಾ ಗುರಿಯಾಗಿದೆ: ಕೊಲ್ಲಾಪುರದಲ್ಲಿ ಪ್ರಧಾನಿ ಮೋದಿ
April 27th, 05:09 pm
2024 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಕೊಲ್ಲಾಪುರದ ಜನರು ಪ್ರಧಾನಿ ಮೋದಿಗೆ ಅಸಾಧಾರಣ ಸ್ವಾಗತವನ್ನು ನೀಡಿದರು. ಕೊಲ್ಲಾಪುರದಲ್ಲಿ ಫುಟ್‌ಬಾಲ್‌ನ ಜನಪ್ರಿಯತೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಐಎನ್‌ಡಿಐ ಮೈತ್ರಿಕೂಟವು ಎರಡು ಸೆಲ್ಫ್ ಗೋಲ್‌ಗಳನ್ನು ಉಂಟುಮಾಡಿದೆ. ಅವರ ದ್ವೇಷ ಮತ್ತು ಭಾರತ-ವಿರೋಧಿ ಪ್ರವೃತ್ತಿಗಳ ರಾಜಕೀಯಕ್ಕೆ.” ಇತ್ತೀಚೆಗೆ ಮುಕ್ತಾಯಗೊಂಡ ಎರಡು ಹಂತದ ಮತದಾನದಲ್ಲಿ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಸಂದೇಶ ಸ್ಪಷ್ಟವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಮೆಗಾ ರ್ಯಾಲಿಯಲ್ಲಿ ಪ್ರಧಾನಿ ಮೋದಿಗೆ ಕೊಲ್ಲಾಪುರದಿಂದ ಅದ್ಬುತ ಸ್ವಾಗತ
April 27th, 05:08 pm
2024 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಕೊಲ್ಲಾಪುರದ ಜನರು ಪ್ರಧಾನಿ ಮೋದಿಗೆ ಅಸಾಧಾರಣ ಸ್ವಾಗತವನ್ನು ನೀಡಿದರು. ಕೊಲ್ಲಾಪುರದಲ್ಲಿ ಫುಟ್‌ಬಾಲ್‌ನ ಜನಪ್ರಿಯತೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “ಐಎನ್‌ಡಿಐ ಮೈತ್ರಿಕೂಟವು ಎರಡು ಸೆಲ್ಫ್ ಗೋಲ್‌ಗಳನ್ನು ಉಂಟುಮಾಡಿದೆ. ಅವರ ದ್ವೇಷ ಮತ್ತು ಭಾರತ-ವಿರೋಧಿ ಪ್ರವೃತ್ತಿಗಳ ರಾಜಕೀಯಕ್ಕೆ.” ಇತ್ತೀಚೆಗೆ ಮುಕ್ತಾಯಗೊಂಡ ಎರಡು ಹಂತದ ಮತದಾನದಲ್ಲಿ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಸಂದೇಶ ಸ್ಪಷ್ಟವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ ವೇಳೆ ಪ್ರಧಾನಮಂತ್ರಿಯವರ ಭಾಷಣ
February 12th, 11:00 am
ಇಂದು, 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ನಿಮ್ಮ ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ಉಪಕ್ರಮವು ವೇಗವಾಗಿ ಪ್ರಗತಿಯಲ್ಲಿದೆ. ಈ ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಉದ್ಯೋಗ ಜಾಹೀರಾತು, ನೇಮಕಾತಿ ಪತ್ರಗಳನ್ನು ನೀಡುವ ವೇಳೆ ಲಂಚ ನೀಡಲೇಬೇಕಾಗಿತ್ತು. ನಾವು ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇವೆ, ದಕ್ಷತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳುತ್ತೇವೆ. ನೇಮಕಾತಿ ಪ್ರಕ್ರಿಯೆಯು ನಿಗದಿತ ಸಮಯಾವಧಿಗೆ ಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರವು ಬದ್ದವಾಗಿದೆ. ಪ್ರತಿಯೊಬ್ಬ ಯುವಕರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತದೆ. ಈಗ ಯುವಕರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ತಮಗಾಗಿ ಒಂದು ಪುಟ್ಟ ಗೂಡು ಕಟ್ಟಬಹುದು ಎಂಬ ವಿಶ್ವಾಸ ಹೊಂದಿದ್ದಾರೆ. 2014 ರಿಂದ, ಯುವಕರನ್ನು ಕೇಂದ್ರ ಸರ್ಕಾರದೊಂದಿಗೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಯತ್ನಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರ ತನ್ನ ಹತ್ತು ವರ್ಷಗಳಲ್ಲಿ ಸುಮಾರು ಒಂದೂವರೆ ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಇಂದು, ನಾವು ದೆಹಲಿಯಲ್ಲಿ ಸಮಗ್ರ ತರಬೇತಿ ಸಂಕೀರ್ಣಕ್ಕೆ ಅಡಿಪಾಯ ಹಾಕಿದ್ದೇವೆ, ಇದು ನಮ್ಮ ಸಾಮರ್ಥ್ಯ-ವರ್ಧನೆಯ ಪ್ರಯತ್ನಗಳನ್ನು ಹೆಚ್ಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ.