“ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತ ಬಜೆಟ್ ನಂತರದ ವೆಬಿನಾರ್‌ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

March 06th, 01:14 pm

ಬಜೆಟ್ ವೆಬಿನಾರ್ ಸರಣಿಯ 3ನೇ ವೆಬಿನಾರ್‌ನಲ್ಲಿ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಸ್ವಾಗತ ಕೋರುತ್ತೇನೆ. ಇದಕ್ಕೂ ಮೊದಲು ತಂತ್ರಜ್ಞಾನ, ಸುಧಾರಣೆಗಳು ಮತ್ತು ಆರ್ಥಿಕ ಬೆಳವಣಿಗೆಯಂತಹ ಪ್ರಮುಖ ವಿಷಯಗಳ ಕುರಿತು 2 ವೆಬಿನಾರ್‌ಗಳನ್ನು ನಡೆಸಲಾಯಿತು. ಇಂದು ಚರ್ಚೆಯು ಗ್ರಾಮೀಣ ಆರ್ಥಿಕತೆ ಮತ್ತು ಕೃಷಿಯಂತಹ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿದೆ. ನೀವೆಲ್ಲರೂ ನಿಮ್ಮ ಅಮೂಲ್ಯ ಸಲಹೆಗಳೊಂದಿಗೆ ಬಜೆಟ್ ತಯಾರಿಕೆಯ ಪ್ರಕ್ರಿಯೆಗೆ ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಸಲಹೆ ಸೂಚನೆಗಳು ಬಜೆಟ್‌ನಲ್ಲಿ ಪ್ರತಿಫಲಿಸುತ್ತಿವೆ, ಅವು ತುಂಬಾ ಉಪಯುಕ್ತವಾಗಿವೆ ಎಂಬುದನ್ನು ನೀವು ಗಮನಿಸಿರಬೇಕು. ಆದರೆ ಈಗ ಬಜೆಟ್ ಮಂಡಿಸಲಾಗಿದೆ, ದೇಶವು ತನ್ನ ಸಂಪೂರ್ಣ ಸಾಮರ್ಥ್ಯ ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ನಿಮ್ಮ ಅನುಭವ, ನಿಮ್ಮ ಸಲಹೆಗಳು ಮತ್ತು ಹೆಚ್ಚಿನ ಸಂಖ್ಯೆಯ ಜನರಿಗೆ ಬಜೆಟ್‌ನ ಪ್ರಯೋಜನಗಳನ್ನು ಗರಿಷ್ಠಗೊಳಿಸಲು ಸರಳ ಮಾರ್ಗಗಳು ಅತ್ಯಗತ್ಯ. ಬಜೆಟ್‌ನಲ್ಲಿ ನಿಗದಿಪಡಿಸಿದ ಪ್ರತಿ ಪೈಸೆಯನ್ನು ಸಂಪೂರ್ಣವಾಗಿ ಮತ್ತು ತ್ವರಿತವಾಗಿ ಹೇಗೆ ಬಳಸಿಕೊಳ್ಳಬಹುದು? ಈ ವೆಬಿನಾರ್‌ನಲ್ಲಿ ನಿಮ್ಮ ಸಲಹೆಗಳು ಸಹ ಅಷ್ಟೇ ಮುಖ್ಯವಾಗಿವೆ.

ಕೃಷಿ ಮತ್ತು ಗ್ರಾಮೀಣ ಪರಿವರ್ತನೆಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

March 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷಿ ಮತ್ತು ಗ್ರಾಮೀಣ ಪರಿವರ್ತನೆ ಕುರಿತಾದ ಬಜೆಟ್ ನಂತರದ ಮೂರನೇ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕುರಿತಾದ ಹಿಂದಿನ ಅಧಿವೇಶನಗಳನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಬಜೆಟ್ ರೂಪಿಸುವ ಸಮಯದಲ್ಲಿ ಪಾಲುದಾರರು ಮೌಲ್ಯಯುತವಾದ ಸಹಕಾರವನ್ನು ನೀಡಿದ್ದಾರೆ ಎಂದು ಹೇಳಿದರು. ಈಗ, ಬಜೆಟ್ ನಂತರ, ದೇಶವು ತನ್ನ ಪೂರ್ಣ ಸಾಮರ್ಥ್ಯದ ಪ್ರಯೋಜನಗಳನ್ನು ಪಡೆಯುವುದು ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಸಲಹೆಗಳು ಮತ್ತು ಈ ವೆಬಿನಾರ್ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ರೀ ಮೋದಿ ಒತ್ತಿಹೇಳಿದರು.

ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

September 16th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

NextGenGST ಸುಧಾರಣೆಗಳು ಡೈರಿ ರೈತರನ್ನು ಸಬಲೀಕರಣಗೊಳಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ: ಪ್ರಧಾನಮಂತ್ರಿ

September 04th, 08:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಡೈರಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕಾಗಿ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ, ಪೌಷ್ಠಿಕಾಂಶ ಸುರಕ್ಷತೆಯನ್ನು ಕಾಪಾಡಿಕೊಂಡು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರ್ತಿಸಿದ್ದಾರೆ.

ಆಗಸ್ಟ್‌ 2 ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 31st, 06:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್‌ 2 ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸುಮಾರು 2200 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿ.ಎಂ.ಎ.ವೈ)ಯಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಮನೆಗಳ ನಿರ್ಮಾಣ 'ಜನಜೀವನ ಸುಲಭಗೊಳಿಸಲು' ಮತ್ತು ಕೋಟಿಗಟ್ಟಲೆ ಭಾರತೀಯರ ಘನತೆಗೆ ಉತ್ತೇಜನ ನೀಡುವುದು: ಪ್ರಧಾನಮಂತ್ರಿ

June 10th, 09:54 am

ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿ.ಎಂ.ಎ.ವೈ)ಯಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಮನೆಗಳ ನಿರ್ಮಾಣ ನಿರ್ಧಾರವು ನಮ್ಮ ರಾಷ್ಟ್ರದ ವಸತಿ ಅಗತ್ಯಗಳನ್ನು ಪರಿಹರಿಸಲು ಮತ್ತು ಪ್ರತಿಯೊಬ್ಬ ನಾಗರಿಕರು ಉತ್ತಮ ಗುಣಮಟ್ಟದ ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಹೊಂದಿರುವ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಎಲ್ಲರಿಗೂ ಮನವಿ ಮಾಡಿದ ಪ್ರಧಾನಮಂತ್ರಿ

February 21st, 03:50 pm

ಎಲ್ಲರೂ, ವಿಶೇಷವಾಗಿ ಯುವಕರು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆಯನ್ನು ಆಯೋಜಿಸುತ್ತಿದೆ.

"2022-23 ರ ಮಾರುಕಟ್ಟೆ ಹಂಗಾಮಿಗೆ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಸಂಪುಟದ ಅನುಮೋದನೆ "

September 08th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ.

ಜವಳಿ ವಲಯದಲ್ಲಿ ಉತ್ಪಾದನೆ ಸಂಪರ್ಕಿತ ಪ್ರೋತ್ಸಾಹ ಯೋಜನೆ ಜಾರಿಗೆ ಸರ್ಕಾರದ ಅನುಮೋದನೆ : ಇದರೊಂದಿಗೆ ಜವಳಿ ವ್ಯಾಪಾರದಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮರಳಿ ಪಡೆಯಲು ಸಜ್ಜು

September 08th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆತ್ಮನಿರ್ಭರ ಭಾರತದತ್ತ ಹೆಜ್ಜೆ ಇಟ್ಟಿದ್ದು, ಜವಳಿ ವಲಯದಲ್ಲಿ ಎಂ.ಎಂ.ಎಫ್ ಜವಳಿ, ಎಂ.ಎಂ.ಎಫ್ ಪ್ರಾಬ್ರಿಕ್ ಮತ್ತು ತಾಂತ್ರಿಕ ಜವಳಿ ವಲಯದ 10 ವಿಭಾಗಗಳು/ ಉತ್ಪನ್ನಗಳಿಗಾಗಿ 10,683 ಕೊಟಿ ರೂ ಮೊತ್ತದ ಪಿ.ಎಲ್.ಐ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಟೀಕಾ: ಪಿಎಂ ಮೋದಿ ಅವರ ತಂತ್ರವನ್ನು ನಾವು ಮುಂದುವರಿಸಬೇಕಾಗಿದೆ

July 16th, 12:07 pm

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿ ಕೋವಿಡ್ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಿದರು. ಮೈಕ್ರೋ-ಕಂಟೈನ್‌ಮೆಂಟ್ ವಲಯಗಳ ಮೇಲೆ ವಿಶೇಷ ಗಮನ ಹರಿಸುವಾಗ ನಾವು ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಟೀಕಾ (ವ್ಯಾಕ್ಸಿನೇಷನ್) ಕಾರ್ಯತಂತ್ರವನ್ನು ಮುಂದುವರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯ ಕುರಿತಂತೆ ಚರ್ಚಿಸಲು 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

July 16th, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್ ಸಂಬಂಧಿತ ಪರಿಸ್ಥಿತಿಯ ಕುರಿತು ಚರ್ಚಿಸಲು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವರು, ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ಎದುರಿಸಲು ಎಲ್ಲ ಸಾಧ್ಯ ನೆರವು ಒದಗಿಸಿದ ಪ್ರಧಾನಮಂತ್ರಿಯವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಸೋಂಕು ತಡೆಯಲು ಕೈಗೊಂಡಿರುವ ಕ್ರಮಗಳು ಮತ್ತು ಲಸಿಕಾ ಕಾರ್ಯಕ್ರಮದ ಪ್ರಗತಿಯ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಲಸಿಕಾ ಕಾರ್ಯತಂತ್ರದ ಕುರಿತಂತೆ ತಮ್ಮ ಪ್ರತಿಕ್ರಿಯೆಯನ್ನೂ ನೀಡಿದರು.

Methods and strategies in dealing with the pandemic should be dynamic: PM Modi

May 20th, 11:40 am

Prime Minister Shri Narendra Modi interacted with the state and district officials on the COVID-19 situation through video conference.

ಕೋವಿಡ್-19 ಪರಿಸ್ಥಿತಿಯ ಬಗ್ಗೆ ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

May 20th, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋವಿಡ್-19 ಪರಿಸ್ಥಿತಿಯ ಕುರಿತು ರಾಜ್ಯ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

Continuous efforts are being made to increase the supply of Corona vaccine on a very large scale: PM Modi

May 18th, 11:40 am

Prime Minister Modi through video conference interacted with field officials from States and Districts regarding their experience in handling the Covid-19 pandemic. During the interaction, the officials thanked the Prime Minister for leading the fight against the second wave of Covid from the front.

ಕೋವಿಡ್ ಪರಿಸ್ಥಿತಿಯ ಬಗ್ಗೆ ದೇಶಾದ್ಯಂತದ ವೈದ್ಯರೊಂದಿಗೆ ಪ್ರಧಾನಿ ಸಂವಾದ

May 18th, 11:39 am

ಕೋವಿಡ್ ಪರಿಸ್ಥಿತಿ ಕುರಿತು ದೇಶಾದ್ಯಂತದ ವೈದ್ಯರ ಗುಂಪಿನೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಕೋವಿಡ್ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ

May 15th, 02:42 pm

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೋವಿಡ್, ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಆರೈಕೆ ಮೂಲಸೌಕರ್ಯ, ಲಸಿಕೆ ಮಾರ್ಗಸೂಚಿಯ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನಮಂತ್ರಿಯವರು ಸ್ಥಳೀಯ ಕಂಟೈನ್ಮೆಂಟ್ ಕಾರ್ಯತಂತ್ರಗಳು ಅದರಲ್ಲೂ ಜಿಲ್ಲೆಗಳಲ್ಲಿ ಟಿಪಿಆರ್ ಹೆಚ್ಚಿರುವ ರಾಜ್ಯಗಳಲ್ಲಿ ಈ ಹೊತ್ತಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು.