ರಷ್ಯಾದ ವಿದೇಶಾಂಗ ಸಚಿವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

May 14th, 04:43 pm

ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವರಾದ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ರಷ್ಯಾದ ಮೊದಲ ಉಪ ಪ್ರಧಾನಮಂತ್ರಿ ಡೆನಿಸ್ ಮ್ಯಾಂಟುರೋವ್ ಅವರಿಂದ ಪ್ರಧಾನಮಂತ್ರಿ ಮೋದಿ ಅವರ ಭೇಟಿ

April 02nd, 07:17 pm

ರಷ್ಯಾ ಒಕ್ಕೂಟದ ಪ್ರಥಮ ಉಪ ಪ್ರಧಾನಮಂತ್ರಿ ಮಾನ್ಯ ಡೆನಿಸ್ ಮ್ಯಾಂಟುರೋವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 15th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ

December 05th, 05:53 pm

ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ

23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ

December 05th, 05:43 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.

ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 05th, 03:45 pm

ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.

ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 05th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ಪ್ರಧಾನಮಂತ್ರಿ ಅವರಿಂದ ರಷ್ಯಾ ಅಧ್ಯಕ್ಷರಿಗೆ ಸ್ವಾಗತ

December 05th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರಾದ ಪುಟಿನ್ ಅವರಿಗೆ ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂಭಾಷಣೆ; ಪುಟಿನ್ ಅವರ 73ನೇ ಜನುಮ ದಿನಕ್ಕೆ ಶುಭ ಹಾರೈಕೆ

October 07th, 06:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಇಂದು ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.

ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ

October 07th, 10:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್‌ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ರಷ್ಯಾದ ಉಪ ಪ್ರಧಾನಮಂತ್ರಿ ಡಿಮಿಟ್ರಿ ಪಟ್ರುಶೆವ್

September 25th, 08:56 pm

ರಷ್ಯಾ ಒಕ್ಕೂಟದ ಉಪ ಪ್ರಧಾನಮಂತ್ರಿ ಘನತೆವೆತ್ತ ಡಿಮಿಟ್ರಿ ಪಟ್ರುಶೆವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಅಧ್ಯಕ್ಷರಾದ ಶ್ರೀ ಪುಟಿನ್

September 17th, 07:14 pm

ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಪ್ರಧಾನಮಂತ್ರಿ ಅವರ 75ನೇ ಹುಟ್ಟುಹಬ್ಬದಂದು ಅಧ್ಯಕ್ಷರಾದ ಶ್ರೀ ಪುಟಿನ್ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ರಷ್ಯಾ ಒಕ್ಕೂಟದ ಅಧ್ಯಕ್ಷರ ಶುಭಾಶಯಗಳು ಮತ್ತು ನಿರಂತರ ಸ್ನೇಹಕ್ಕಾಗಿ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ರಷ್ಯಾ-ಯುಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವ ಕುರಿತು ಪ್ರಧಾನಿ ಮೋದಿ ಅವರ ದೊಡ್ಡ ಹೇಳಿಕೆ

September 01st, 12:48 pm

ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸಿದರು, ಅಲ್ಲಿ ಯುಕ್ರೇನ್ ಸಂಘರ್ಷವು ಚರ್ಚೆಯ ಕೇಂದ್ರಬಿಂದುವಾಗಿತ್ತು. ಶಾಂತಿಗಾಗಿ ಇತ್ತೀಚಿನ ಪ್ರಯತ್ನಗಳನ್ನು ಪ್ರಧಾನಿ ಮೋದಿ ಸ್ವಾಗತಿಸಿದರು ಮತ್ತು ಎಲ್ಲಾ ಕಡೆಯವರು ರಚನಾತ್ಮಕವಾಗಿ ಮುಂದುವರಿಯುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು ಮತ್ತು ಶಾಶ್ವತ ಶಾಂತಿಗೆ ಮಾರ್ಗವನ್ನು ಕಂಡುಕೊಳ್ಳುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ವಿಶಾಲ ಮಾನವ ಆಯಾಮವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಇದು ಕೇವಲ ಪ್ರಾದೇಶಿಕ ಕಾಳಜಿಯಲ್ಲ, ಬದಲಾಗಿ ಮಾನವೀಯತೆಯ ಕರೆ ಎಂದು ಹೇಳಿದರು.

‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ರಷ್ಯಾ ಅಧ್ಯಕ್ಷರಾದ ಪುಟಿನ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

August 08th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಮಾನ್ಯ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ರಷ್ಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

July 24th, 11:04 pm

ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.