ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ
March 06th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಎಲ್.ಕೆ.ಎಂ.ನಲ್ಲಿ ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವಲಯದಲ್ಲಿತಾಂತ್ರಿಕ ಪ್ರಗತಿಯ ಮೂಲಕ ಪರಿವರ್ತನೆಯನ್ನು ತರುವ ಸಹಕಾರ ಸೆ ಸಮೃದ್ಧಿಯನ್ನು ಉತ್ತೇಜಿಸುವುದು, ಸಹಕಾರಿ ಸಂಸ್ಥೆಗಳಲ್ಲಿ ಯುವಕರು ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಯೋಜನೆಗಳು ಮತ್ತು ಸಹಕಾರ ಸಚಿವಾಲಯದ ವಿವಿಧ ಉಪಕ್ರಮಗಳ ಬಗ್ಗೆ ಚರ್ಚೆಗಳು ನಡೆದವು.