ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
November 19th, 01:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ನವ ರಾಯ್‌ಪುರದ “ಸತ್ಯಸಾಯಿ ಸಂಜೀವಿನಿ ಮಕ್ಕಳ ಹೃದ್ರೋಗ ಆಸ್ಪತ್ರೆ”ಯಲ್ಲಿ ಯಶಸ್ವೀ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿ ಸಂವಾದ
November 01st, 05:30 pm
ನಾನು ಹಾಕಿ ಚಾಂಪಿಯನ್. ನಾನು ಹಾಕಿಯಲ್ಲಿ 5 ಪದಕಗಳನ್ನು ಗೆದ್ದಿದ್ದೇನೆ. ನನ್ನ ಶಾಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ, ನನ್ನ ಹೃದಯದಲ್ಲಿ ರಂಧ್ರವಿದೆ ಎಂದು ವೈದ್ಯರು ಪತ್ತೆ ಹಚ್ಚಿದರು. ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದೆ, ಶಸ್ತ್ರಚಿಕಿತ್ಸೆಗೆ ಒಳಗಾದೆ, ನಾನೀಗ ಗುಣಮುಖವಾಗಿದ್ದು, ನಾನು ಮತ್ತೆ ಹಾಕಿ ಆಡಬಹುದು.ಜನ್ಮಜಾತ ಹೃದಯ ಕಾಯಿಲೆಗಳನ್ನು ಉತ್ತಮ ಚಿಕಿತ್ಸೆ ಮೂಲಕ ನಿವಾರಿಸಿಕೊಂಡ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
November 01st, 05:15 pm
'ಹೃದಯದ ಮಾತು (ದಿಲ್ ಕಿ ಬಾತ್)' ಕಾರ್ಯಕ್ರಮದ ಭಾಗವಾಗಿ, ಛತ್ತೀಸ್ ಗಢದ ನವ ರಾಯ್ ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆದ 'ಜೀವನದ ಉಡುಗೊರೆ' ಸಮಾರಂಭದಲ್ಲಿ ಜನ್ಮಜಾತ ಹೃದಯ ಕಾಯಿಲೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಿದರು.