ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಗವರ್ನರ್ ಜನರಲ್ ಅವರನ್ನು ಭೇಟಿ ಮಾಡಿದರು
July 09th, 01:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನಲ್ಲಿ ಆಸ್ಟ್ರೇಲಿಯಾದ ಗವರ್ನರ್ ಜನರಲ್ ಗೌರವಾನ್ವಿತ ಸ್ಯಾಮ್ ಮೋಸ್ಟಿನ್ ಎಸಿ ಅವರನ್ನು ಭೇಟಿ ಮಾಡಿದರು.ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಪ್ರಧಾನಮಂತ್ರಿ ಭೇಟಿ
July 03rd, 08:42 pm
ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 6-8, 2026 ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಇಂಡೋನೇಷ್ಯಾಕ್ಕೆ ಪ್ರಧಾನಮಂತ್ರಿಯವರ ನಾಲ್ಕನೇ ಭೇಟಿ ಮತ್ತು ಮೇ 2018ರಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧಗಳು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿದ ನಂತರ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.