ಫಲಿತಾಂಶಗಳ ಪಟ್ಟಿ: 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಮಂತ್ರಿಯವರ ಭಾರತ ಭೇಟಿ
July 02nd, 10:39 pm
ಸೆಮಿಕಂಡಕ್ಟರ್‌ಗಳು, ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ ಮತ್ತು ಔಷಧಗಳು ಸೇರಿದಂತೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಯೋಜನೆ ಆಧಾರಿತ ಸಹಯೋಗವನ್ನು ಉತ್ತೇಜಿಸುತ್ತದೆ. ಭಾರತ-ಜಪಾನ್ ಫ್ಯಾಕ್ಟ್ ಶೀಟ್ 2.0 ಈ ನಿರ್ಣಾಯಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತ-ಜಪಾನ್ ಜಿ2ಜಿ ಮತ್ತು ಬಿ 2 ಬಿ ಕಾರ್ಯಕ್ರಮಗಳನ್ನು ಸೆರೆಹಿಡಿಯುತ್ತದೆ.16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ
July 02nd, 10:14 pm
ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.ಇಂಧನ ಚೇತರಿಕೆಯ ಕುರಿತು ಭಾರತ ಗಣರಾಜ್ಯದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್ ನ ಆರ್ಥಿಕತೆ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯದ ನಡುವಿನ ಜಂಟಿ ಹೇಳಿಕೆ
July 02nd, 10:04 pm
ಜುಲೈ 2, 2026 ರಂದು, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಟಕೈಚಿ ಸನಾಯೆ ಅವರು ಭಾರತದ ನವದೆಹಲಿಯಲ್ಲಿ ಭೇಟಿಯಾದರು. ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಏಷ್ಯಾದ ಜವಾಬ್ದಾರಿಯುತ ಶಕ್ತಿಗಳು ಮತ್ತು ಪ್ರಮುಖ ಇಂಧನ ಬಳಕೆಯ ದೇಶಗಳಾಗಿ ಜಂಟಿಯಾಗಿ ಇಂಧನ ಚೇತರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ತಮ್ಮ ಜಂಟಿ ಸಂಕಲ್ಪದ ಆಶಯವನ್ನು ವ್ಯಕ್ತಪಡಿಸಿದರು.ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
July 02nd, 03:35 pm
ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.ಜಪಾನ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 02nd, 01:30 pm
ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್‌ನಿಂದ ಹಿಡಿದು ಎಲೆಕ್ಟ್ರಾನಿಕ್ಸ್ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.ಜಪಾನ್ ನ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 08th, 09:34 pm
ಜಪಾನ್ ನ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಘನತೆವೆತ್ತ ಸನೈ ತಕೈಚಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:46 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ
October 29th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 21st, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.