ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 12th, 11:30 pm
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗೋಡೆ ಕುಸಿತ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.