ಪ್ರಧಾನಿಯವರು ಆಗಸ್ಟ್ 12 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ

August 10th, 04:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 12ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:15 ರ ಸುಮಾರಿಗೆ ಅವರು ಸಾಗರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ಸಂತ ಶಿರೋಮಣಿ ಗುರುದೇವ್ ಶ್ರೀ ರವಿದಾಸ್ ಜಿ ಸ್ಮಾರಕ ಸ್ಥಳದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಧನಾದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ಸಂತ ಶಿರೋಮಣಿ ಗುರುದೇವ್ ಶ್ರೀ ರವಿದಾಸ್ ಜಿ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.