ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ

July 04th, 05:56 am

ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು

July 04th, 04:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.