ಗುಜರಾತ್‌ನ ವಡೋದರಾದಲ್ಲಿ ಸರ್ದಾರ್‌ಧಾಮ್ ಹಾಸ್ಟೆಲ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 11th, 06:15 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಜಿ, ಕೇಂದ್ರ ಸಚಿವರು ಮತ್ತು ಸ್ಥಾಪಕ ಟ್ರಸ್ಟಿಗಳಾದ ಮನ್ಸುಖ್ ಭಾಯಿ ಮಾಂಡವೀಯ, ಸರ್ದಾರ್ ಧಾಮ್‌ನ ಅಧ್ಯಕ್ಷ ಗಗ್ಜಿ ಭಾಯಿ ಸುತಾರಿಯಾ ಜಿ, ದುಷ್ಯಂತ್ ಭಾಯಿ ಪಟೇಲ್, ಪಂಕಜ್ ಭಾಯಿ ಪಟೇಲ್, ರಾಜ್ಯ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ವೇದಿಕೆಯಲ್ಲಿರುವ ಗುಜರಾತ್ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ದಾನಿಗಳೆ, ಟ್ರಸ್ಟಿಗಳೆ, ಗಣ್ಯ ಅತಿಥಿಗಳೆ ಮತ್ತು ಗುಜರಾತ್‌ನ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಗುಜರಾತ್‌ನ ವಡೋದರಾದಲ್ಲಿ ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 11th, 06:00 pm
ಗುಜರಾತ್‌ನ ವಡೋದರಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದರು. ಸೋಮನಾಥ ದೇವಾಲಯವು ತನ್ನ 75ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವನ್ನು ಆಚರಿಸಿದ ದಿನದಂದು ವಡೋದರಾದ ಸರ್ದಾರ್ ಧಾಮ್‌ನಲ್ಲಿ ನಡೆದ ಗಣ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಶಿಕ್ಷಣ ಸಂಸ್ಥೆಗಳ ಉದ್ಘಾಟನೆ ಮತ್ತು ಆಧ್ಯಾತ್ಮಿಕ ಸ್ಮರಣಾರ್ಥ ಶುಭ ಸಂದರ್ಭದ ಕಾಕತಾಳೀಯತೆಯನ್ನು ಉಲ್ಲೇಖಿಸಿದರು. ಡಾ. ದುಷ್ಯಂತ್ ಮತ್ತು ದಕ್ಷಾ ಪಟೇಲ್ ಸಂಕೀರ್ಣವನ್ನು ಉದ್ಘಾಟಿಸುವುದರ ಜೊತೆಗೆ ಬೋಧನಾ ಸಹಾಯ ಯೋಜನೆಯನ್ನು ಉದ್ಘಾಟಿಸುವುದು ಮತ್ತು ಬಹು ಶೈಕ್ಷಣಿಕ ಯೋಜನೆಗಳಿಗೆ ಶಿಲಾನ್ಯಾಸ ಸಮಾರಂಭಗಳನ್ನು ನಡೆಸುವುದರೊಂದಿಗೆ, ಪ್ರಧಾನಮಂತ್ರಿಯವರು ಈ ಉಪಕ್ರಮಗಳನ್ನು ಯುವಜನರ ಭವಿಷ್ಯದ ವೃತ್ತಿಜೀವನಕ್ಕಾಗಿರುವ ಉಡಾವಣಾ ಪ್ಯಾಡ್‌ಗಳೆಂದು ಬಣ್ಣಿಸಿದರು. ಕೆಲವೇ ಗಂಟೆಗಳ ಹಿಂದೆ, ನಾನು ಪ್ರಭಾಸ್ ಪಠಾಣ್‌ನಲ್ಲಿ ಸೋಮನಾಥ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದ್ದೆ, ಮತ್ತು ಈಗ ನಾವು ಇಲ್ಲಿ ಪರಿವರ್ತನಾತ್ಮಕ ಶಿಕ್ಷಣ ಸಂಸ್ಥೆಗಳನ್ನು ಉದ್ಘಾಟಿಸುತ್ತಿದ್ದೇವೆ, ಈ ಸಂಯೋಜನೆ ಪರಂಪರೆ ಮತ್ತು ಪ್ರಗತಿ ಹೇಗೆ ಒಟ್ಟಿಗೆ ಮುಂದುವರಿಯುತ್ತದೆ ಎಂಬುದನ್ನು ಸಂಕೇತಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.ಗುಜರಾತ್ ನ ಸೋಮನಾಥದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 11th, 03:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ಪುಣ್ಯತಿಥಿಯಂದು ‘ಭಾರತದ ಉಕ್ಕಿನ ಮನುಷ್ಯ’ನಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
December 15th, 08:44 am
ಇಂದು ಭಾರತದ ‘ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ವರ್ಷದ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವಪೂರ್ಣ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ದೇಶವನ್ನು ಏಕೀಕರಿಸಿ, ಭಾರತವನ್ನು ಏಕತೆಯೆಂಬ ಒಂದೇ ನೂಲಿನಲ್ಲಿ ನೇಯ್ದು ಕಟ್ಟಲು ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ್ದರು ಎಂದು ಬಣ್ಣಿಸಿದರು.ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರಿಂದ ಏಕತಾ ಪ್ರತಿಜ್ಞೆಯ ಬೋಧನೆ; ಈ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿಯವರ ಕಛೇರಿಯ ಅಧಿಕಾರಿಗಳು
October 31st, 02:06 pm
ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರ ಕಚೇರಿಯ ಅಧಿಕಾರಿಗಳು ಇಂದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಏಕತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.ಅಕ್ಟೋಬರ್ 30-31 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 10:58 am
ಅಕ್ಟೋಬರ್ 30-31 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಪ್ರಧಾನಮಂತ್ರಿ ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದು, ಅದೇ ದಿನ ಸಂಜೆ 5:15ರ ಸುಮಾರಿಗೆ ಅಲ್ಲಿ ಇ-ಬಸ್ ಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6:30ರ ಸುಮಾರಿಗೆ, ಅವರು ಏಕ್ತಾ ನಗರದಲ್ಲಿ 1,140 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 09th, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ವಾರಣಾಸಿಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ಅವರು 3,880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಸರ್ದಾರ್ ವಲ್ಲಭಬಾಯಿ ಪಟೇಲ್ ಜಯಂತಿ: ಪ್ರಧಾನಿ ಮೋದಿ ಸ್ಮರಣೆ
October 31st, 08:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಟೇಲ್ ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅಸಾಧಾರಣ ಸಮರ್ಪಣೆ ಮನೋಭಾವದಿಂದ ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದವರು ಎಂದು ಸ್ಮರಿಸಿಕೊಂಡಿದ್ದಾರೆ.ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.