ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 24th, 10:39 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

August 24th, 10:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 11th, 11:01 am

ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.

ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

September 11th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.

ಸೆಪ್ಟೆಂಬರ್ 11ರಂದು ಸರ್ದಾರ್‌ಧಾಮ್ ಭವನದ ಲೋಕಾರ್ಪಣೆ ಮತ್ತು ಸರ್ಧಾರ್‌ದಾಮ್‌ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ

September 10th, 01:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಸರ್ದಾರ್ ಧಾಮ್‌ಭವನದ ಲೋಕಾರ್ಪಣೆ ಮತ್ತು ಸರ್ದಾರ್‌ಧಾಮ್ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ.