ಗುಜರಾತ್‌ನ ವಡೋದರಾದಲ್ಲಿ ಸರ್ದಾರ್‌ಧಾಮ್ ಹಾಸ್ಟೆಲ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 11th, 06:15 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಜಿ, ಕೇಂದ್ರ ಸಚಿವರು ಮತ್ತು ಸ್ಥಾಪಕ ಟ್ರಸ್ಟಿಗಳಾದ ಮನ್ಸುಖ್ ಭಾಯಿ ಮಾಂಡವೀಯ, ಸರ್ದಾರ್ ಧಾಮ್‌ನ ಅಧ್ಯಕ್ಷ ಗಗ್ಜಿ ಭಾಯಿ ಸುತಾರಿಯಾ ಜಿ, ದುಷ್ಯಂತ್ ಭಾಯಿ ಪಟೇಲ್, ಪಂಕಜ್ ಭಾಯಿ ಪಟೇಲ್, ರಾಜ್ಯ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ವೇದಿಕೆಯಲ್ಲಿರುವ ಗುಜರಾತ್ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ದಾನಿಗಳೆ, ಟ್ರಸ್ಟಿಗಳೆ, ಗಣ್ಯ ಅತಿಥಿಗಳೆ ಮತ್ತು ಗುಜರಾತ್‌ನ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಗುಜರಾತ್‌ನ ವಡೋದರಾದಲ್ಲಿ ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 11th, 06:00 pm
ಗುಜರಾತ್‌ನ ವಡೋದರಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಧಾಮ್ ಹಾಸ್ಟೆಲ್ ಉದ್ಘಾಟಿಸಿದರು. ಸೋಮನಾಥ ದೇವಾಲಯವು ತನ್ನ 75ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವವನ್ನು ಆಚರಿಸಿದ ದಿನದಂದು ವಡೋದರಾದ ಸರ್ದಾರ್ ಧಾಮ್‌ನಲ್ಲಿ ನಡೆದ ಗಣ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಶಿಕ್ಷಣ ಸಂಸ್ಥೆಗಳ ಉದ್ಘಾಟನೆ ಮತ್ತು ಆಧ್ಯಾತ್ಮಿಕ ಸ್ಮರಣಾರ್ಥ ಶುಭ ಸಂದರ್ಭದ ಕಾಕತಾಳೀಯತೆಯನ್ನು ಉಲ್ಲೇಖಿಸಿದರು. ಡಾ. ದುಷ್ಯಂತ್ ಮತ್ತು ದಕ್ಷಾ ಪಟೇಲ್ ಸಂಕೀರ್ಣವನ್ನು ಉದ್ಘಾಟಿಸುವುದರ ಜೊತೆಗೆ ಬೋಧನಾ ಸಹಾಯ ಯೋಜನೆಯನ್ನು ಉದ್ಘಾಟಿಸುವುದು ಮತ್ತು ಬಹು ಶೈಕ್ಷಣಿಕ ಯೋಜನೆಗಳಿಗೆ ಶಿಲಾನ್ಯಾಸ ಸಮಾರಂಭಗಳನ್ನು ನಡೆಸುವುದರೊಂದಿಗೆ, ಪ್ರಧಾನಮಂತ್ರಿಯವರು ಈ ಉಪಕ್ರಮಗಳನ್ನು ಯುವಜನರ ಭವಿಷ್ಯದ ವೃತ್ತಿಜೀವನಕ್ಕಾಗಿರುವ ಉಡಾವಣಾ ಪ್ಯಾಡ್‌ಗಳೆಂದು ಬಣ್ಣಿಸಿದರು. ಕೆಲವೇ ಗಂಟೆಗಳ ಹಿಂದೆ, ನಾನು ಪ್ರಭಾಸ್ ಪಠಾಣ್‌ನಲ್ಲಿ ಸೋಮನಾಥ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದ್ದೆ, ಮತ್ತು ಈಗ ನಾವು ಇಲ್ಲಿ ಪರಿವರ್ತನಾತ್ಮಕ ಶಿಕ್ಷಣ ಸಂಸ್ಥೆಗಳನ್ನು ಉದ್ಘಾಟಿಸುತ್ತಿದ್ದೇವೆ, ಈ ಸಂಯೋಜನೆ ಪರಂಪರೆ ಮತ್ತು ಪ್ರಗತಿ ಹೇಗೆ ಒಟ್ಟಿಗೆ ಮುಂದುವರಿಯುತ್ತದೆ ಎಂಬುದನ್ನು ಸಂಕೇತಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.