ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.ಮಾರ್ಚ್ 8 ರಂದು ದೆಹಲಿಯಲ್ಲಿ ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
March 06th, 05:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 8 ರಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿಯವರು ಸರೋಜಿನಿ ನಗರದಲ್ಲಿರುವ ಜಿಪಿಆರ್‌ಎ ಟೈಪ್-5 ಕ್ವಾರ್ಟರ್ಸ್‌ಗೆ ಭೇಟಿ ನೀಡಿ, ಮಹಿಳಾ ಹಂಚಿಕೆದಾರರಿಗೆ ಬೀಗದ ಕೀಗಳನ್ನು ಹಸ್ತಾಂತರಿಸಲಿದ್ದಾರೆ.