Previous govts have for decades neglected the fishermen community. But now the NDA govt is progressing and boosting them to unlimited capabilities: PM
March 11th, 01:00 pm
Addressing the Golden Jubilee celebrations of the Akhila Kerala Dheevara Sabha, Prime Minister Narendra Modi said the occasion marked a historic milestone as the organisation completed 50 years of service to the fishermen community. Congratulating the members and fishermen across Keralam, the PM iterated, “For five decades, this organisation has worked continuously to protect the rights of fishermen. This journey reflects your hard work, dedication and spirit of service.”PM Modi addresses Akhila Kerala Dheevara Sabha’s Golden Jubilee celebrations
March 11th, 12:30 pm
Addressing the Golden Jubilee celebrations of the Akhila Kerala Dheevara Sabha, Prime Minister Narendra Modi said the occasion marked a historic milestone as the organisation completed 50 years of service to the fishermen community. Congratulating the members and fishermen across Keralam, the PM iterated, “For five decades, this organisation has worked continuously to protect the rights of fishermen. This journey reflects your hard work, dedication and spirit of service.”ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಪ್ರಧಾನಮಂತ್ರಿ ಅವರು ಎಲ್‍ವಿಎಂ3-ಎಂ6 ಮೂಲಕ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಉಡಾವಣೆಗಾಗಿ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
December 24th, 10:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್‍ವಿಎಂ3-ಎಂ6 ಉಡಾವಣಾ ವಾಹನದ ಮೂಲಕ 'ಬ್ಲೂಬರ್ಡ್ ಬ್ಲಾಕ್-2' (BlueBird Block-2) ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಅಭಿನಂದಿಸಿದ್ದಾರೆ. ಬ್ಲೂಬರ್ಡ್ ಬ್ಲಾಕ್-2 ಅಮೆರಿಕದ ಒಂದು ಬಾಹ್ಯಾಕಾಶ ನೌಕೆಯಾಗಿದ್ದು, ಇದು ಭಾರತದಿಂದ ಉದ್ದೇಶಿತ ಕಕ್ಷೆಗೆ ಉಡಾವಣೆಗೊಂಡ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ ಮತ್ತು ಆತ್ಮನಿರ್ಭರ ಭಾರತದ ಕಡೆಗಿನ ನಮ್ಮ ಪ್ರಯತ್ನಗಳ ಪ್ರತಿಬಿಂಬವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2
November 22nd, 09:57 pm
ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ
November 16th, 03:50 pm
ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು
November 16th, 03:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.ಇಸ್ರೋದಿಂದ ಭಾರತದ ಅತ್ಯಂತ ಭಾರವಾದ ಸಂವಹನ ಉಪಗ್ರಹ CMS-03ರ ಯಶಸ್ವಿ ಉಡಾವಣೆಗೆ ಪ್ರಧಾನಮಂತ್ರಿ ಅಭಿನಂದನೆ
November 02nd, 07:22 pm
ಭಾರತದ ಅತ್ಯಂತ ಭಾರವಾದ ಸಂವಹನ ಉಪಗ್ರಹ CMS-03ರ ಯಶಸ್ವಿ ಉಡಾವಣೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗೆ ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶ
August 23rd, 11:00 am
ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ವರ್ಷದ ಬಾಹ್ಯಾಕಾಶ ದಿನದ ವಿಷಯ 'ಆರ್ಯಭಟದಿಂದ ಗಗನಯಾನಕ್ಕೆ: ಪ್ರಾಚೀನ ಜ್ಞಾನದಿಂದ ಅನಂತ ಸಾಧ್ಯತೆಗಳಿಗೆ'. ಇದು ಭೂತಕಾಲದ ವಿಶ್ವಾಸ ಮತ್ತು ಭವಿಷ್ಯದ ಸಂಕಲ್ಪವನ್ನು ಸಾಕಾರಗೊಳಿಸುತ್ತದೆ. ಇಂದು ಇಷ್ಟು ಕಡಿಮೆ ಅವಧಿಯಲ್ಲಿ, ರಾಷ್ಟ್ರೀಯ ಬಾಹ್ಯಾಕಾಶ ದಿನವು ನಮ್ಮ ಯುವಕರಿಗೆ ಉತ್ಸಾಹ ಮತ್ತು ಸ್ಫೂರ್ತಿಯ ಸೆಲೆಯಾಗಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇದು ನಿಜಕ್ಕೂ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತರುವ ವಿಷಯವಾಗಿದೆ. ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಬಾಹ್ಯಾಕಾಶ ವಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ನಮ್ಮ ವಿಜ್ಞಾನಿಗಳಿಗೆ ಮತ್ತು ಎಲ್ಲಾ ಯುವಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇತ್ತೀಚೆಗೆ ಭಾರತವು 'ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಅಂತಾರಾಷ್ಟ್ರೀಯ ಒಲಿಂಪಿಯಾಡ್' ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ, ವಿಶ್ವಾದ್ಯಂತದ 60ಕ್ಕೂ ಹೆಚ್ಚು ದೇಶಗಳಿಂದ ಸುಮಾರು 300 ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. ನಮ್ಮ ಭಾರತೀಯ ಯುವಕರು ಸಹ ಪದಕಗಳನ್ನು ಗೆದ್ದಿದ್ದಾರೆ. ಈ ಒಲಿಂಪಿಯಾಡ್ ಬಾಹ್ಯಾಕಾಶ ವಲಯದಲ್ಲಿ ಭಾರತದ ಉದಯೋನ್ಮುಖ ನಾಯಕತ್ವದ ಸಂಕೇತವಾಗಿದೆ.2025ನೇ ಸಾಲಿನ ʻರಾಷ್ಟ್ರೀಯ ಬಾಹ್ಯಾಕಾಶ ದಿನʼದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಬಾಹ್ಯಾಕಾಶ ದಿನ- 2025’ರ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಆರ್ಯಭಟದಿಂದ ಗಗನಯಾನದವರೆಗೆ ಎಂಬ ಈ ವರ್ಷದ ಧ್ಯೇಯವಾಕ್ಯವು ಭಾರತದ ಗತಕಾಲದ ವಿಶ್ವಾಸ ಮತ್ತು ಅದರ ಭವಿಷ್ಯದ ಸಂಕಲ್ಪ ಎರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಅತ್ಯಲ್ಪ ಕಾಲದಲ್ಲಿ, ʻರಾಷ್ಟ್ರೀಯ ಬಾಹ್ಯಾಕಾಶ ದಿನʼವು ಭಾರತದ ಯುವಕರಿಗೆ ಉತ್ಸಾಹ ಮತ್ತು ಆಕರ್ಷಣೆಯ ಸಂದರ್ಭವಾಗಿ ಮಾರ್ಪಟ್ಟಿದೆ, ಇದು ರಾಷ್ಟ್ರೀಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು. ವಿಜ್ಞಾನಿಗಳು ಮತ್ತು ಯುವಕರು ಸೇರಿದಂತೆ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಗೆ ಅವರು ಶುಭಾಶಯಗಳನ್ನು ತಿಳಿಸಿದರು. ಭಾರತವು ಪ್ರಸ್ತುತ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಕುರಿತ ಅಂತಾರಾಷ್ಟ್ರೀಯ ಒಲಿಂಪಿಯಾಡ್ಗೆ ಆತಿಥ್ಯ ವಹಿಸುತ್ತಿದ್ದು, ಅರವತ್ತಕ್ಕೂ ಹೆಚ್ಚು ದೇಶಗಳ ಸುಮಾರು 300 ಯುವ ಸ್ಪರ್ಧಿಗಳು ಅದರಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಈ ಸ್ಪರ್ಧೆಯಲ್ಲಿ ಅನೇಕ ಭಾರತೀಯ ಸ್ಪರ್ಧಿಗಳು ಪದಕಗಳನ್ನು ಗೆದ್ದಿರುವುದಕ್ಕೆ ಶ್ರೀ ಮೋದಿ ಸಂತಸ ವ್ಯಕ್ತಪಡಿಸಿದರು. ಈ ಒಲಿಂಪಿಯಾಡ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಉದಯೋನ್ಮುಖ ಜಾಗತಿಕ ನಾಯಕತ್ವದ ಸಂಕೇತವಾಗಿದೆ ಎಂದು ಅವರು ಹೇಳಿದರು. ಯುವಜನರಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಲು, ʻಭಾರತೀಯ ಬಾಹ್ಯಾಕಾಶ ಹ್ಯಾಕಥಾನ್ʼ ಮತ್ತು ʻರೊಬೊಟಿಕ್ಸ್ ಚಾಲೆಂಜ್ʼ ನಂತಹ ಉಪಕ್ರಮಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ʻಇಸ್ರೋʼ) ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಸಂತೋಷ ವ್ಯಕ್ತಪಡಿಸಿದರು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಜೇತರನ್ನು ಅವರು ಅಭಿನಂದಿಸಿದರು.ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
May 07th, 12:00 pm
ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 07th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ
April 08th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.ಪಿಕ್ಸೆಲ್ ಸ್ಪೇಸ್ ನಿಂದ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿದೆ : ಪ್ರಧಾನಮಂತ್ರಿ
January 17th, 05:30 pm
ಪಿಕ್ಸೆಲ್ ಸ್ಪೇಸ್ ಬಾಹ್ಯಾಕಾಶ ಸಂಸ್ಥೆ ತಯಾರಿಸಿರುವ ಭಾರತದ ಮೊದಲ ಖಾಸಗಿ ಉಪಗ್ರಹ ಸಮೂಹವು ಭಾರತದ ಯುವಜನರ ಅನನ್ಯ ಪ್ರತಿಭೆಯನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಖಾಸಗಿ ವಲಯದ ವಿಸ್ತೃತ ಸಾಮರ್ಥ್ಯಗಳ ಬಗ್ಗೆ ತಿಳಿಸುತ್ತದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ಉಪಗ್ರಹಗಳ ಬಾಹ್ಯಾಕಾಶ ನಿಲ್ದಾಣದ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 16th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್ ನ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ಮತ್ತು ಇಡೀ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಶ್ರೀ ಮೋದಿಯವರು ಈ ಸಾಹಸೀ ಪ್ರದರ್ಶನವನ್ನು ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.