ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 07:00 pm

ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 09:00 am

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಗುಜರಾತ್‌ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

October 31st, 08:44 am

ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 27th, 12:30 pm

ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು

July 27th, 12:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 11th, 02:00 pm

ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,

ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.

ಡಿಎಂಕೆ 'ಡಿವೈಡ್, ಡಿವೈಡ್ ಮತ್ತು ಡಿವೈಡ್' ಮೇಲೆ ಸ್ಥಾಪಿಸಿದೆ ಮತ್ತು 'ಸನಾತನ'ವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ವೆಲ್ಲೂರಿನಲ್ಲಿ ಪ್ರಧಾನಿ ಮೋದಿ

April 10th, 02:50 pm

ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೆಲ್ಲೂರಿನ ರೋಮಾಂಚಕ ಜನರು ಆತ್ಮೀಯ ಸ್ವಾಗತ ಕೋರಿದರು. ವೆಲ್ಲೂರಿನ ಇತಿಹಾಸ, ಪುರಾಣ, ಶೌರ್ಯಕ್ಕೆ ನಾನು ತಲೆಬಾಗುತ್ತೇನೆ ಎಂದರು. ವೆಲ್ಲೂರು ಬ್ರಿಟಿಷರ ವಿರುದ್ಧ ಒಂದು ಪ್ರಮುಖ ಕ್ರಾಂತಿಯನ್ನು ಸೃಷ್ಟಿಸಿತು ಮತ್ತು ಪ್ರಸ್ತುತ, ಎನ್.ಡಿ.ಎ.ಗೆ ಅದರ ದೃಢವಾದ ಬೆಂಬಲವು 'ಫಿರ್ ಏಕ್ ಬಾರ್ ಮೋದಿ ಸರ್ಕಾರ್'ನ ಮನೋಭಾವವನ್ನು ಪ್ರದರ್ಶಿಸುತ್ತದೆ.

ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವಾಗ ವೆಲ್ಲೂರು ಮತ್ತು ಮೆಟ್ಟುಪಾಳ್ಯಂನಲ್ಲಿ ಭಾರೀ ಜನ ಬೆಂಬಲ

April 10th, 10:30 am

ಲೋಕಸಭೆ ಚುನಾವಣೆಗೆ ಮುನ್ನ, ತಮಿಳುನಾಡಿನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೆಲ್ಲೂರು ಮತ್ತು ಮೆಟ್ಟುಪಾಳ್ಯಂನಲ್ಲಿ ಭಾರೀ ಜನ ಬೆಂಬಲದಿಂದ ಆತ್ಮೀಯ ಸ್ವಾಗತ ನೀಡಲಾಯಿತು. ವೆಲ್ಲೂರಿನ ಇತಿಹಾಸ, ಪುರಾಣ, ಶೌರ್ಯಕ್ಕೆ ನಾನು ತಲೆಬಾಗುತ್ತೇನೆ ಎಂದರು. ವೆಲ್ಲೂರು ಬ್ರಿಟಿಷರ ವಿರುದ್ಧ ಒಂದು ಪ್ರಮುಖ ಕ್ರಾಂತಿಯನ್ನು ಸೃಷ್ಟಿಸಿತು ಮತ್ತು ಪ್ರಸ್ತುತ, ಎನ್.ಡಿ.ಎಗೆ ಅದರ ದೃಢವಾದ ಬೆಂಬಲವು 'ಫಿರ್ ಏಕ್ ಬಾರ್ ಮೋದಿ ಸರ್ಕಾರ್'ನ ಮನೋಭಾವವನ್ನು ಪ್ರದರ್ಶಿಸುತ್ತದೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 12:00 pm

ಪೊಂಗಲ್ ಹಬ್ಬದ ಶುಭ ದಿನದಂದು, ತಮಿಳುನಾಡಿನ ಪ್ರತಿ ಮನೆಯಲ್ಲೂ ಪೊಂಗಲ್ ಹಬ್ಬದ ಹರಿವು ಕಂಡುಬರುತ್ತದೆ. ನಿಮ್ಮ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿಯ ಹರಿವು ಅಡೆತಡೆಯಿಲ್ಲದೆ ಮುಂದುವರಿಯಲಿ ಎಂಬುದು ನನ್ನ ಆಸೆ. ನಿನ್ನೆಯಷ್ಟೇ, ದೇಶವು ಲೋಹ್ರಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿ-ಉತ್ತರಾಯಣವನ್ನು ಆಚರಿಸುತ್ತಿದ್ದರೆ, ಇತರರು ನಾಳೆ ಆಚರಿಸಬಹುದು. ಮಾಘ್ ಬಿಹು ಕೂಡ ಹತ್ತಿರದಲ್ಲಿದೆ. ಈ ಹಬ್ಬಗಳಿಗಾಗಿ ನಾನು ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

​​​​​​​ನವದೆಹಲಿಯಲ್ಲಿ ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ

January 14th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಪೊಂಗಲ್ ಹಬ್ಬದಲ್ಲಿ ಆಚರಣೆಯಲ್ಲಿ ಭಾಗವಹಿಸಿದರು.

ಮನ್ ಕಿ ಬಾತ್‌ಗಾಗಿ ಜನರು ತೋರಿದ ಪ್ರೀತಿ ಅಭೂತಪೂರ್ವ: ಪ್ರಧಾನಿ ಮೋದಿ

May 28th, 11:30 am

ನನ್ನ ಪ್ರೀತಿಯ ದೇಶಬಾಂಧವರೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಬಾರಿಯ 'ಮನದ ಮಾತಿನ' ಸಂಚಿಕೆ 2ನೇ ಶತಕದ ಆರಂಭವಾಗಿದೆ. ಕಳೆದ ತಿಂಗಳು ನಾವೆಲ್ಲರೂ ಶತಕದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದೇವೆ. ನಿಮ್ಮ ಭಾಗವಹಿಸುವಿಕೆ ಈ ಕಾರ್ಯಕ್ರಮದ ಬಹು ದೊಡ್ಡ ಶಕ್ತಿಯಾಗಿದೆ. 100ನೇ ಸಂಚಿಕೆ ಪ್ರಸಾರವಾಗುವ ಸಮಯದಲ್ಲಿ ಸಂಪೂರ್ಣ ದೇಶ ಒಂದು ಸೂತ್ರದಲ್ಲಿ ಬಂಧಿಸಿದಂತಾಗಿತ್ತು. ನಮ್ಮ ಸ್ವಚ್ಛತಾ ಕರ್ಮಚಾರಿ ಸಹೋದರ ಮತ್ತು ಸಹೋದರಿಯರು ಅಥವಾ ವಿವಿಧ ಕ್ಷೇತ್ರಗಳ ಅನುಭವಿಗಳಾಗಿರಲಿ, 'ಮನದ ಮಾತು' ಎಲ್ಲರನ್ನೂ ಒಟ್ಟಿಗೆ ಸೇರಿಸುವ ಕೆಲಸ ಮಾಡಿದೆ. 'ಮನದ ಮಾತಿಗೆ' ನೀವೆಲ್ಲರೂ ತೋರಿದ ಆತ್ಮೀಯತೆ ಮತ್ತು ಪ್ರೀತಿ ಅಭೂತಪೂರ್ವವಾಗಿದೆ, ಅದು ಭಾವುಕರನ್ನಾಗಿಸುವಂತಿದೆ. 'ಮನದ ಮಾತು' ಪ್ರಸಾರವಾದಾಗ, ಪ್ರಪಂಚದ ವಿವಿಧ ದೇಶಗಳಲ್ಲಿ, ಬೇರೆ ಬೇರೆ ಸಮಯಕ್ಕೆ ಅಂದರೆ, ಎಲ್ಲೋ ಸಂಜೆ ಮತ್ತು ಎಲ್ಲೋ ತಡರಾತ್ರಿಯಾಗಿತ್ತು, ಇದನ್ನು ಲೆಕ್ಕಿಸದೆ, 100 ನೇ ಸಂಚಿಕೆಯನ್ನು ಹೆಚ್ಚಿನ ಸಂಖ್ಯೆಯ ಜನರು ಆಲಿಸಲು ಸಮಯ ಮೀಸಲಿಟ್ಟರು. ನಾನು ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ನ್ಯೂಜಿಲೆಂಡ್‌ನ ಆ ವೀಡಿಯೊವನ್ನು ಕೂಡ ನೋಡಿದೆ, ಅದರಲ್ಲಿ 100 ವರ್ಷದ ತಾಯಿಯೊಬ್ಬರು ಆಶೀರ್ವಾದ ನೀಡುತ್ತಿದ್ದರು. ದೇಶ ವಿದೇಶದ ಜನರು 'ಮನದ ಮಾತಿನ' ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಜನರು ರಚನಾತ್ಮಕ ವಿಶ್ಲೇಷಣೆಯನ್ನು ಸಹ ಮಾಡಿದ್ದಾರೆ. ‘ಮನದ ಮಾತಿನಲ್ಲಿ’ ದೇಶ ಮತ್ತು ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತ್ರ ಚರ್ಚೆಯಾಗಿರುವುದನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ಗೌರವಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ.

ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 29th, 07:46 pm

ನಿಮ್ಮೆಲ್ಲರಿಗೂ ಗಂಗಾ-ಪುಷ್ಕರಾಳು ಹಬ್ಬದ ಶುಭಾಶಯಗಳು! ನೀವೆಲ್ಲರೂ ಕಾಶಿಗೆ ಬಂದಿರುವುದರಿಂದ ಈ ಭೇಟಿಯಲ್ಲಿ ನೀವೆಲ್ಲರೂ ವೈಯಕ್ತಿಕವಾಗಿ ನನ್ನ ಅತಿಥಿಗಳು. ಅತಿಥಿಗಳು ದೇವರಿಗೆ ಸಮಾನ ಎಂದು ನಾವು ನಂಬುತ್ತೇವೆ. ಕೆಲವು ಕಾರ್ಯ ನಿಮಿತ್ತ ನಿಮ್ಮನ್ನು ಸ್ವಾಗತಿಸಲು ನಾನು ಅಲ್ಲಿ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ನಾನು ನಿಮ್ಮೆಲ್ಲರ ನಡುವೆ ಇರಬಹುದೆಂದು ಬಯಸುತ್ತೇನೆ. ಈ ಕಾರ್ಯಕ್ರಮಕ್ಕಾಗಿ ನಾನು ಕಾಶಿ-ತೆಲುಗು ಸಮಿತಿ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಜಿ.ವಿ.ಎಲ್. ನರಸಿಂಹರಾವ್ ಜಿ ಅವರನ್ನು ಅಭಿನಂದಿಸುತ್ತೇನೆ. ಕಾಶಿಯ ಘಟ್ಟಗಳಲ್ಲಿ ನಡೆಯುವ ಈ ಗಂಗಾ-ಪುಷ್ಕರಾಳು ಉತ್ಸವವು ಗಂಗಾ ಮತ್ತು ಗೋದಾವರಿ ಸಂಗಮದಂತೆ. ಇದು ಭಾರತದ ಪ್ರಾಚೀನ ನಾಗರಿಕತೆಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳ ಸಂಗಮದ ಆಚರಣೆಯಾಗಿದೆ. ಕೆಲವು ತಿಂಗಳ ಹಿಂದೆ ಕಾಶಿ-ತಮಿಳು ಸಂಗಮವನ್ನು ಇದೇ ಕಾಶಿ ಭೂಮಿಯಲ್ಲಿ ಆಯೋಜಿಸಿದ್ದು ನಿಮಗೆ ನೆನಪಿರಬಹುದು. ಕೆಲವೇ ದಿನಗಳ ಹಿಂದೆ ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿತ್ತು. ಈ ‘ಆಜಾದಿ ಕಾ ಅಮೃತ ಕಾಲ್’ ದೇಶದ ವೈವಿಧ್ಯತೆ ಮತ್ತು ವಿವಿಧ ವಿಚಾರಧಾರೆಗಳ ಸಂಗಮ ಎಂದು ಆಗ ಹೇಳಿದ್ದೆ. ಈ ವೈವಿಧ್ಯಗಳ ಸಂಗಮದಿಂದ ರಾಷ್ಟ್ರೀಯತೆಯ ಅಮೃತವು ಹೊರಹೊಮ್ಮುತ್ತಿದೆ, ಇದು ಭಾರತವನ್ನು ಅನಂತ ಭವಿಷ್ಯದವರೆಗೆ ಜೀವಂತವಾಗಿರಿಸುತ್ತದೆ.

ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 29th, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಭಾಷಣ ಮಾಡಿದರು.

​​​​​​​ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ

April 26th, 02:30 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ಲಾ ಗಣೇಶನ್ ಅವರೇ, ಜಾರ್ಖಂಡ್ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಪುರುಷೋತ್ತಮ ರೂಪಾಲಾ ಅವರೇ, ಎಲ್. ಮುರುಗನ್ ಅವರೇ ಮತ್ತು ಮೀನಾಕ್ಷಿ ಲೇಖಿ ಅವರೇ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಸೌರಾಷ್ಟ್ರ ತಮಿಳು ಸಂಗಮದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 10:30 am

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅತಿಥಿಗೆ ಆತಿಥ್ಯ ನೀಡುವುದು ವಿಶೇಷ ಅನುಭವ, ಆದರೆ ದಶಕಗಳ ನಂತರ ಮನೆಗೆ ಮರಳುವ ಅನುಭವ ಮತ್ತು ಸಂತೋಷಕ್ಕೆ ಸಾಟಿಯಿಲ್ಲ ಎಂಬ ಅಂಶದ ಬಗ್ಗೆ ಗಮನ ಸೆಳೆದರು. ಅದೇ ಉತ್ಸಾಹದಿಂದ ರಾಜ್ಯಕ್ಕೆ ಭೇಟಿ ನೀಡುತ್ತಿರುವ ತಮಿಳುನಾಡಿನ ಸ್ನೇಹಿತರಿಗೆ ಸೌರಾಷ್ಟ್ರದ ಜನರು ಕೆಂಪು ಹಾಸಿನ ಸ್ವಾಗತ ನೀಡುತ್ತಿದ್ದಾರೆ ಎಂಬುದನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.

ಏಪ್ರಿಲ್ 26ರಂದು ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿಯವರು

April 25th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ಬೆಳಿಗ್ಗೆ 10:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸೌರಾಷ್ಟ್ರ ತಮಿಳು ಸಂಗಮಂ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸೌರಾಷ್ಟ್ರ ತಮಿಳು ಸಂಗಮದ ವೀಡಿಯೊವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ

April 18th, 10:35 am

ಸೌರಾಷ್ಟ್ರ ತಮಿಳು ಸಂಗಮದ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.