The HPV vaccination campaign, launched from Ajmer, marks a significant step towards empowering the nation’s Nari Shakti: PM Modi in Rajasthan
February 28th, 12:00 pm
At a public gathering in Ajmer, PM Modi expressed satisfaction that the “double-engine government” in Rajasthan has completed two years of rapid progress. He launched projects worth approximately ₹17,000 crore and handed over appointment letters to youth. The PM also launched the nationwide HPV vaccination campaign, describing it as a pivotal step toward empowering India’s ‘Nari Shakti’ (women power) and ensuring the health of mothers and daughters.PM Modi launches Nationwide HPV Vaccination Campaign and Development Projects Worth ₹17,000 Crore in Ajmer, Rajasthan
February 28th, 11:30 am
At a public gathering in Ajmer, PM Modi expressed satisfaction that the “double-engine government” in Rajasthan has completed two years of rapid progress. He launched projects worth approximately ₹17,000 crore and handed over appointment letters to youth. The PM also launched the nationwide HPV vaccination campaign, describing it as a pivotal step toward empowering India’s ‘Nari Shakti’ (women power) and ensuring the health of mothers and daughters.ಸಾವಿತ್ರಿಬಾಯಿ ಫುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 03rd, 08:07 am
ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇವೆ ಮತ್ತು ಶಿಕ್ಷಣದ ಮೂಲಕ ಸಮಾಜದ ಪರಿವರ್ತನೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪ್ರವರ್ತಕ ಸಮಾಜ ಸುಧಾರಕರನ್ನು ಸ್ಮರಿಸಿದರು.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ಮೋದಿ
February 21st, 05:00 pm
ಪ್ರಧಾನಿ ಮೋದಿ ನವದೆಹಲಿಯಲ್ಲಿ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನಗಳಿಂದ ರಚಿಸಲಾದ ನಮ್ಮ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ವೀಕ್ಷಿಸುತ್ತಿರುವ ಮಹತ್ವದ ಸಮಯದಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು.98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 04:30 pm
1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ
January 03rd, 10:57 am
ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ.The unity of OBCs, SCs and STs is troubling Congress, and therefore they want the communities to fight each other: PM Modi in Pune
November 12th, 01:20 pm
In his final Pune rally, PM Modi said, Empowering Pune requires investment, infrastructure, and industry, and we’ve focused on all three. Over the last decade, foreign investment has hit record highs, and Maharashtra has topped India’s list of preferred destinations in the past two and a half years. Pune and nearby areas are gaining a major share of this investment.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 07:05 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 05th, 07:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.ಮಹಾರಾಷ್ಟ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಸಮರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 29th, 12:45 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಜನಪ್ರಿಯ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂದೆ ಅವರೇ, ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ ಮತ್ತು ಶ್ರೀ ಅಜಿತ್ ಪವಾರ್ ಅವರೇ, ಪುಣೆಯಿಂದ ಬಂದಿರುವ ಸಂಸದರು ಮತ್ತು ನನ್ನ ಕ್ಯಾಬಿನೆಟ್ನ ಯುವ ಸಹೋದ್ಯೋಗಿ ಶ್ರೀ ಮುರಳೀಧರ್ ಅವರೇ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಹೊಂದಿರುವ ಇತರ ಕೇಂದ್ರ ಸಚಿವರೇ, ನನ್ನ ಮುಂದೆ ಕಾಣುತ್ತಿರುವ ಮಹಾರಾಷ್ಟ್ರದ ಎಲ್ಲಾ ಹಿರಿಯ ಸಚಿವರೇ, ಸಂಸದರೇ, ಶಾಸಕರೇ ಮತ್ತು ಈ ಕಾರ್ಯಕ್ರಮದೊಂದಿಗೆ ಸಂಬಂಧಪಟ್ಟಿರುವ ಎಲ್ಲಾ ಸಹೋದರ ಸಹೋದರಿಯರೇ!ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿ
September 29th, 12:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದರು.ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 29 ರಂದು 11,200 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿರುವ ಮತ್ತು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಮಂತ್ರಿ
September 28th, 07:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ರಂದು ಅಪರಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಸಮರ್ಪಣೆ, ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಮೋದಿ ಬದುಕಿರುವವರೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ: ನಂದೂರ್‌ಬಾರ್‌ನಲ್ಲಿ ಪ್ರಧಾನಿ ಮೋದಿ
May 10th, 12:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ಪೂರ್ತಿದಾಯಕ ನಾಯಕರಾದ ಜನನಾಯಕ್ ಕೃಷ್ಣಾಜಿ ರಾವ್ ಸಾಬಳೆ, ಮಹಾತ್ಮ ಜ್ಯೋತಿಬಾ ಫುಲೆ, ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಅವರು ನಮನ ಸಲ್ಲಿಸಿದರು. ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯ ಶುಭ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಾವು ಪಡೆಯುವ ಆಶೀರ್ವಾದಗಳು ಶಾಶ್ವತವಾಗುತ್ತವೆ ಎಂದು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.