ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ
July 11th, 07:59 am
ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ
July 02nd, 10:14 pm
ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 16th, 10:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ ಅವರು 2026ರ ಜೂನ್ 16 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ
May 22nd, 09:31 pm
ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 20th, 11:00 pm
ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ
May 20th, 10:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಭಾರತ - ಇಸ್ರೇಲ್ ಜಂಟಿ ಹೇಳಿಕೆ
February 26th, 07:44 pm
ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಪ್ರಧಾನಮಂತ್ರಿ ಇದೇ 25-26ರಂದು ಇಸ್ರೇಲ್‌ಗೆ ಭೇಟಿ
February 24th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ 2026ರ ಫೆಬ್ರವರಿ 25-26ರಂದು ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಇಸ್ರೇಲ್ ಗೆ ಪ್ರಧಾನಮಂತ್ರಿ ಅವರ ಎರಡನೇ ಭೇಟಿಯಾಗಲಿದೆ.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 17th, 04:00 pm
ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ
January 27th, 02:53 pm
2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
January 27th, 01:30 pm
ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ
January 22nd, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.