ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಪ್ರಧಾನಮಂತ್ರಿ ಅವರು ಸೆಮಿಕಾನ್ ಇಂಡಿಯಾ 2025ರ ಸಂದರ್ಭದಲ್ಲಿ ಪ್ರಮುಖ ಸಿಇಒಗಳೊಂದಿಗೆ ಸಂವಾದ ನಡೆಸಿದರು
September 03rd, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಮಿಕಾನ್ ಇಂಡಿಯಾ 2025ರ ಸಂದರ್ಭದಲ್ಲಿ ಸೆಮಿಕಂಡಕ್ಟರ್ ವಲಯದ ಪ್ರಮುಖ ಸಿಇಒಗಳೊಂದಿಗೆ ಸಂವಾದ ನಡೆಸಿದರು. ಈ ವಲಯದಲ್ಲಿ ಭಾರತದ ನಿರಂತರ ಸುಧಾರಣಾ ಪ್ರಯಾಣದ ಬಗ್ಗೆ ನಾನು ಮಾತನಾಡಿದ್ದೇನೆ, ಇದರಲ್ಲಿ ಬಲವಾದ ಮೂಲಸೌಕರ್ಯ ನಿರ್ಮಿಸುವುದು ಹಾಗೂ ಕೌಶಲ್ಯ ಮತ್ತು ನಾವೀನ್ಯತೆಗೆ ಒತ್ತು ನೀಡುವುದು ಸೇರಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.ಯಶೋಭೂಮಿ, ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
September 02nd, 10:40 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಅಶ್ವಿನಿ ವೈಷ್ಣವ್ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜೀ, ಕೇಂದ್ರ ರಾಜ್ಯ ಸಚಿವ ಜಿತಿನ್ ಪ್ರಸಾದ್ ಜೀ, SEMI ಸಂಸ್ಥೆಯ ಅಧ್ಯಕ್ಷ ಅಜಿತ್ ಮನೋಚಾ ಜೀ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಸೆಮಿಕಂಡಕ್ಟರ್ ಉದ್ಯಮದ ಸಿಇಒಗಳು ಮತ್ತು ಅವರ ಸಹವರ್ತಿಗಳೇ, ವಿವಿಧ ದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೇ, ಸ್ಟಾರ್ಟಪ್ ಗಳೊಂದಿಗೆ ಸಂಬಂಧ ಹೊಂದಿರುವ ಉದ್ಯಮಿಗಳೇ, ವಿವಿಧ ರಾಜ್ಯಗಳ ನನ್ನ ಯುವ ವಿದ್ಯಾರ್ಥಿ ಮಿತ್ರರೇ, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ - 2025 ಉದ್ಘಾಟಿಸಿದರು
September 02nd, 10:15 am
ಭಾರತದ ಸೆಮಿಕಂಡಕ್ಟರ್ ಪೂರಕ ವ್ಯವಸ್ಥೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ-2025' ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತ ಮತ್ತು ವಿದೇಶಗಳ ಸೆಮಿಕಂಡಕ್ಟರ್ ಉದ್ಯಮದ ಸಿ.ಇ.ಒಗಳು ಮತ್ತು ಸಹವರ್ತಿಗಳ ಉಪಸ್ಥಿತಿಗೆ ಧನ್ಯವಾದ ತಿಳಿಸಿದರು. ವಿವಿಧ ದೇಶಗಳ ಗಣ್ಯ ಅತಿಥಿಗಳು, ನವೋದ್ಯಮಗಳ ಉದ್ಯಮಿಗಳು ಮತ್ತು ದೇಶಾದ್ಯಂತದ ವಿವಿಧ ರಾಜ್ಯಗಳ ಯುವ ವಿದ್ಯಾರ್ಥಿಗಳನ್ನು ಅವರು ಸ್ವಾಗತಿಸಿದರು.ಸೆಪ್ಟೆಂಬರ್ 2ರಂದು ನವದೆಹಲಿಯ ಯಶೋಭೂಮಿಯಲ್ಲಿ 'ಸೆಮಿಕಾನ್ ಇಂಡಿಯಾ - 2025' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 01st, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಯಶೋಭೂಮಿಯಲ್ಲಿ ಭಾರತದ ಅರೆವಾಹಕ ಪರಿಸರ ವ್ಯವಸ್ಥೆಯನ್ನು ವೇಗವರ್ಧಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ - 2025' ಅನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 3ರಂದು ಬೆಳಗ್ಗೆ 9:30ರಿಂದ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಇದರಲ್ಲಿ ಅವರು ಸಿಇಒಗಳ ದುಂಡುಮೇಜಿನ ಸಭೆಯಲ್ಲೂ ಭಾಗವಹಿಸಲಿದ್ದಾರೆ.