ಪ್ರಧಾನಿ ಮೋದಿ ಅವರು ಚೀನಾದ ಟಿಯಾಂಜಿನ್‌ಗೆ ಆಗಮಿಸಿದರು

August 30th, 04:00 pm

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಚೀನಾಕ್ಕೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಟಿಯಾಂಜಿನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಅವರು ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಅಧ್ಯಕ್ಷ ಪುಟಿನ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

September 15th, 02:15 pm

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.