ಡಾ. ಶಂಕರ್ ರಾವ್ ತತ್ವವಾಡಿಯವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
March 13th, 08:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಶಂಕರ್ ರಾವ್ ತತ್ವವಾಡಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಡಾ. ಶಂಕರ್ ರಾವ್ ತತ್ವವಾಡಿಯವರು ರಾಷ್ಟ್ರ ನಿರ್ಮಾಣ ಮತ್ತು ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕೆ ನೀಡಿದ ವ್ಯಾಪಕ ಕೊಡುಗೆಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಸಂದರ್ಭಗಳಲ್ಲಿ ಅವರೊಂದಿಗೆ ಮಾತನಾಡುವ ಅವಕಾಶ ದೊರೆತದ್ದಕ್ಕೆ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಅವರ ಸೈದ್ಧಾಂತಿಕ ಸ್ಪಷ್ಟತೆ ಮತ್ತು ನಿಖರವಾದ ಕಾರ್ಯಶೈಲಿ ಸದಾ ಸ್ಪೂರ್ತಿದಾಯಕ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.