ಮಿಯಾಗಿ ಪ್ರಾಂತ್ಯದ ಸೆಂಡೈನಲ್ಲಿರುವ ಅರೆವಾಹಕ (ಸೆಮಿಕಂಡಕ್ಟರ್) ಸೌಲಭ್ಯಕ್ಕೆ ಪ್ರಧಾನಮಂತ್ರಿ ಭೇಟಿ

August 30th, 11:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಘನತೆವೆತ್ತ ಶ್ರೀ ಶಿಗೆರು ಇಶಿಬಾ ಅವರೊಂದಿಗೆ ಇಂದು ಮಿಯಾಗಿ ಪ್ರಾಂತ್ಯದ ಸೆಂಡೈಗೆ ಪ್ರಯಾಣ ಬೆಳೆಸಿದರು. ಸೆಂಡೈನಲ್ಲಿ, ಉಭಯ ನಾಯಕರು ಅರೆವಾಹಕ (ಸೆಮಿಕಂಡಕ್ಟರ್) ವಲಯದಲ್ಲಿ ಜಪಾನಿನ ಪ್ರಮುಖ ಕಂಪನಿಯಾದ ಟೋಕಿಯೊ ಎಲೆಕ್ಟ್ರಾನ್ ಮಿಯಾಗಿ ಲಿಮಿಟೆಡ್ (ಟಿಇಎಲ್ ಮಿಯಾಗಿ) ಗೆ ಭೇಟಿ ನೀಡಿದರು. ಜಾಗತಿಕ ಅರೆವಾಹಕ ಮೌಲ್ಯ ಸರಪಳಿಯಲ್ಲಿ ಟೆಲ್ ನ ಪಾತ್ರ, ಅದರ ಸುಧಾರಿತ ಉತ್ಪಾದನಾ ಸಾಮರ್ಥ್ಯಗಳು ಮತ್ತು ಭಾರತದೊಂದಿಗೆ ನಡೆಯುತ್ತಿರುವ ಮತ್ತು ಯೋಜಿತ ಸಹಯೋಗಗಳ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಲಾಯಿತು. ಕಾರ್ಖಾನೆ ಭೇಟಿಯು ಸೆಮಿಕಂಡಕ್ಟರ್ ಪೂರೈಕೆ ಸರಪಳಿ, ಫ್ಯಾಬ್ರಿಕೇಷನ್ ಮತ್ತು ಪರೀಕ್ಷೆ ಕ್ಷೇತ್ರದಲ್ಲಿ ಸಹಯೋಗವನ್ನು ರೂಪಿಸಲು ಉಭಯ ದೇಶಗಳ ನಡುವೆ ಇರುವ ಅವಕಾಶಗಳ ಬಗ್ಗೆ ಪ್ರಾಯೋಗಿಕ ತಿಳುವಳಿಕೆಯನ್ನು ನಾಯಕರಿಗೆ ನೀಡಿತು.

ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ

August 30th, 08:00 am

ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.

15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಜಂಟಿ ಹೇಳಿಕೆ: ನಮ್ಮ ಮುಂದಿನ ಪೀಳಿಗೆಯ ಭದ್ರತೆ ಮತ್ತು ಸಮೃದ್ಧಿಗಾಗಿ ಸಹಭಾಗಿತ್ವ

August 29th, 07:06 pm

ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಇಶಿಬಾ ಶಿಗೇರು ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಆಗಸ್ಟ್ 29-30, ರಂದು 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್‌ಗೆ ಅಧಿಕೃತ ಭೇಟಿ ನೀಡಿದರು. 2025 ರ ಆಗಸ್ಟ್ 29 ರಂದು ಸಂಜೆ ಪ್ರಧಾನಮಂತ್ರಿ ಮೋದಿ ಅವರನ್ನು ಪ್ರಧಾನಮಂತ್ರಿ ಇಶಿಬಾ ಅವರು ಪ್ರಧಾನಮಂತ್ರಿ ಕಚೇರಿಯಲ್ಲಿ (ಕಾಂಟೆ) ಬರಮಾಡಿಕೊಂಡರು, ಅಲ್ಲಿ ಅವರಿಗೆ ವಿಧ್ಯುಕ್ತ ಗೌರವ ರಕ್ಷೆಯನ್ನು ನೀಡಲಾಯಿತು. ಇಬ್ಬರು ಪ್ರಧಾನಮಂತ್ರಿಗಳು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು, ಈ ಸಂದರ್ಭದಲ್ಲಿ ಅವರು ನಾಗರಿಕ ಸಂಬಂಧಗಳು, ಹಂಚಿಕೆಯ ಮೌಲ್ಯಗಳು ಮತ್ತು ಆಸಕ್ತಿಗಳು, ಸಾಮಾನ್ಯ ಕಾರ್ಯತಂತ್ರದ ದೃಷ್ಟಿಕೋನ ಮತ್ತು ಪರಸ್ಪರ ಗೌರವದಲ್ಲಿ ಬೇರೂರಿರುವ ಭಾರತ ಮತ್ತು ಜಪಾನ್ ನಡುವಿನ ದೀರ್ಘಕಾಲದ ಸ್ನೇಹವನ್ನು ನೆನಪಿಸಿಕೊಂಡರು. ಕಳೆದ ದಶಕದಲ್ಲಿ ಭಾರತ-ಜಪಾನ್ ಪಾಲುದಾರಿಕೆಯು ಮಾಡಿದ ಮಹತ್ವದ ಪ್ರಗತಿಯನ್ನು ಇಬ್ಬರೂ ಪ್ರಧಾನಮಂತ್ರಿಗಳು ಶ್ಲಾಘಿಸಿದರು ಮತ್ತು ಮುಂಬರುವ ದಶಕಗಳಲ್ಲಿ ಪರಸ್ಪರ ಭದ್ರತೆ ಮತ್ತು ಸಮೃದ್ಧಿಯನ್ನು ಸಾಧಿಸಲು ಕಾರ್ಯತಂತ್ರದ ಮತ್ತು ಭವಿಷ್ಯತ್ತಿನ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದರು.

ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

August 29th, 03:59 pm

ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.

ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 29th, 11:20 am

ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.

ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 29th, 11:02 am

ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಜಪಾನ್‌ನ ಟೋಕಿಯೊಗೆ ಆಗಮಿಸಿದರು

August 29th, 06:43 am

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಜಪಾನ್‌ಗೆ ಆಗಮಿಸಿದ್ದಾರೆ. ಜಪಾನ್‌ನಲ್ಲಿ ಪ್ರಧಾನಿ ಮೋದಿ ಅವರು 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರು ಭಾರತ ಮತ್ತು ಜಪಾನ್ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಪರಿಶೀಲಿಸಲಿದ್ದಾರೆ ಮತ್ತು ಪ್ರಮುಖ ವಿಷಯಗಳನ್ನು ಚರ್ಚಿಸಲಿದ್ದಾರೆ.

ಪ್ರಧಾನಮಂತ್ರಿ ಅವರ ಜಪಾನ್ ಮತ್ತು ಚೀನಾ ದೇಶಗಳ ಭೇಟಿಯ ಮುನ್ನಾ ದಿನದಂದು ನೀಡಿರುವ ನಿರ್ಗಮನ ಹೇಳಿಕೆ

August 28th, 08:40 pm

ನನ್ನ ಭೇಟಿಯ ಸಮಯದಲ್ಲಿ, ಕಳೆದ ಹನ್ನೊಂದು ವರ್ಷಗಳಲ್ಲಿ ಆಗಿರುವ ಸ್ಥಿರತೆ ಕುರಿತು ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಿರುವ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಮುಂದಿನ ಹಂತವನ್ನು ರೂಪಿಸುವತ್ತ ನಾವು ಗಮನಹರಿಸುತ್ತೇವೆ. ನಮ್ಮ ಸಹಯೋಗಕ್ಕೆ ಹೊಸ ರೆಕ್ಕೆ ಹಾಗೂ ಆಯಾಮಗಳನ್ನು ನೀಡಲು, ನಮ್ಮ ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸಲು ಮತ್ತು ಕೃತಕ ಬುದ್ಧಿಮತ್ತೆ (ಎಐ)ಮತ್ತು ಸೆಮಿಕಂಡಕ್ಟರ್‌ ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಮುನ್ನಡೆಸಲು ನಾವು ಪ್ರಯತ್ನಿಸುತ್ತೇವೆ. ಈ ಭೇಟಿಯು ನಮ್ಮ ನಾಗರಿಕತೆಯ ಪರಸ್ಪರ ಬಂಧಗಳು ಮತ್ತು ನಮ್ಮ ಜನರನ್ನು ಸಂಪರ್ಕಿಸುವ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ.

ಜಪಾನ್ ಮತ್ತು ಚೀನಾಕ್ಕೆ ಪ್ರಧಾನ ಮಂತ್ರಿಗಳ ಭೇಟಿ

August 22nd, 06:15 pm

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಆಗಸ್ಟ್ 29–30, 2025 ರವರೆಗೆ ಜಪಾನ್‌ಗೆ ಮತ್ತು ಆಗಸ್ಟ್ 31–1, 2025 ರವರೆಗೆ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಜಪಾನ್‌ನಲ್ಲಿ, ಪ್ರಧಾನಿಯವರು 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಜಪಾನಿನ ಪ್ರಧಾನಿ ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಚೀನಾದಲ್ಲಿ, ಪ್ರಧಾನಿಯವರು ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಿ7 ಶೃಂಗಸಭೆಯಲ್ಲಿ ಜಪಾನ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಂವಾದ

June 18th, 03:00 pm

2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ 51ನೇ ಜಿ7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್ ಜಿ7 ಶೃಂಗಸಭೆಯಲ್ಲಿ ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶಿಗೇರು ಇಶಿಬಾ ಅವರೊಂದಿಗೆ ಒಳನೋಟವುಳ್ಳ ಸಂವಾದ ನಡೆಸಿದರು. ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಮತ್ತು ಜಪಾನ್ ಬದ್ಧವಾಗಿವೆ ಎಂದು ನಾಯಕರು ದೃಢಪಡಿಸಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ

April 24th, 03:29 pm

ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.