ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 03:22 pm

ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

May 11th, 12:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಪುನರ್ ನಿರ್ಮಾಣಗೊಂಡ ದೇವಾಲಯವು ಭಕ್ತರಿಗೆ ಬಾಗಿಲು ತೆರೆದು 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿ ನಡೆದ ಸೋಮನಾಥ್ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 11th, 10:20 am

ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ ಮತ್ತು ಶಾಸಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಯಾಗಿ 75 ವರ್ಷಗಳು, ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ

May 11th, 10:15 am

ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 27th, 12:30 pm

ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು

July 27th, 12:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.

ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ

July 04th, 05:56 am

ಈ ಸಂಜೆ ನಿಮ್ಮೆಲ್ಲರೊಂದಿಗೆ ಇರುವುದು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಪ್ರಧಾನಮಂತ್ರಿ ಕಮಲಾ ಜೀ ಅವರ ಅದ್ಭುತ ಆತಿಥ್ಯ ಮತ್ತು ಕರುಣಾಮಯಿ ಮಾತುಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಸಮುದಾಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು

July 04th, 04:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.

ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 21st, 11:45 pm

ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.

ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

August 21st, 11:30 pm

ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್‌ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.

ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ

May 10th, 04:00 pm

ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್‌ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

May 10th, 03:30 pm

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.