ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 27th, 12:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:15ರ ಸುಮಾರಿಗೆ ಅಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಠದ 550ನೇ ವರ್ಷಾಚರಣೆಯಾದ 'ಸಾರ್ಧ ಪಂಚಮ ಶತಮಾನೋತ್ಸವ' (550ನೇ ವರ್ಷಾಚರಣೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ಅತ್ಯದ್ಭುತ, ಸಾಟಿಯಿಲ್ಲದ ಮತ್ತು ಊಹಿಸಲಾಗದ ದೀಪೋತ್ಸವ! ಭವ್ಯವಾದ ಮತ್ತು ದೈವಿಕ ದೀಪೋತ್ಸವಕ್ಕಾಗಿ ಅಯೋಧ್ಯೆಯ ಜನರಿಗೆ ಅನಂತ ಅಭಿನಂದನೆಗಳು: ಪ್ರಧಾನಮಂತ್ರಿ

October 30th, 10:45 pm

ಭವ್ಯವಾದ ಮತ್ತು ದೈವಿಕ ದೀಪೋತ್ಸವದ ಆಚರಣೆಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯ ಜನರಿಗೆ ಮತ್ತು ಇಡೀ ರಾಷ್ಟ್ರಕ್ಕೆ ಹೃತ್ಪೂರ್ವಕ ಅಭಿನಂದನೆ ತಿಳಿಸುತ್ತಾ ಮನಃಪೂರ್ವಕ ಶುಭಾಶಯ‌ ಕೋರಿದ್ದಾರೆ.

ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಂಬಂಧಿಸಿದಂತೆ ಭಾರತದ ರಾಷ್ಟ್ರಪತಿಗಳ ಪತ್ರಕ್ಕೆ ಉತ್ತರಿಸಿದ ಪ್ರಧಾನಿ

January 23rd, 06:54 pm

ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಂಬಂಧಿಸಿದಂತೆ ಭಾರತದ ರಾಷ್ಟ್ರಪತಿಗಳು ಬರೆದ ಪತ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಉತ್ತರವನ್ನು ಇಂದು ಹಂಚಿಕೊಂಡಿದ್ದಾರೆ.

ರಾಮಸೇತುವಿನ ಆರಂಭ ಸ್ಥಳ "ಅರಿಚಲ್ ಮುನೈ"ಗೆ ಭೇಟಿ ನೀಡಿದ ಪ್ರಧಾನಮಂತ್ರಿ

January 21st, 03:42 pm

ರಾಮಸೇತುವಿನ ಆರಂಭದ ಸ್ಥಳವಾದ ಅರಿಚಲ್ ಮುನೈಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು.

​​​​​​​ಅಯೋಧ್ಯೆ ದೀಪೋತ್ಸವಕ್ಕೆ ಪ್ರಧಾನಿ ನಮನ

November 12th, 08:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆ ದೀಪೋತ್ಸವದ ಶಕ್ತಿಯು ದೇಶದಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ ಎಂದು ಹೇಳಿದರು.