ಗುಜರಾತ್‌ನ ಗಾಂಧಿನಗರದಲ್ಲಿ ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

March 31st, 10:25 am

ಆಚಾರ್ಯ ಭಗವಂತ ಶ್ರೀ ಪದ್ಮಸಾಗರ ಸುರೀಶ್ವರ್ ಜೀ ಮಹಾರಾಜ್ ಸಾಹೇಬ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರಾಜ್ಯದ ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜೀ, ಪರಮ ಪೂಜ್ಯ ಆಚಾರ್ಯ ಭಗವಂತ, ಪೂಜ್ಯ ಸಾಧು ಭಗವಂತ, ಸಾಧ್ವಿಜಿ ಭಗವಂತ, ಎಲ್ಲ ಆಚಾರ್ಯರು ಮತ್ತು ಮುನಿ ಭಗವಂತರು ಹಾಗು ಈ ಪವಿತ್ರ ಸಮಾರಂಭದಲ್ಲಿ ಹಾಜರಿರುವ ಗೌರವಾನಿತ ದಾನಿಗಳು, ವಿದ್ವಾಂಸರು, ಮಹಿಳೆಯರೇ ಮತ್ತು ಮಹನೀಯರೇ!

ಮಹಾವೀರ ಜಯಂತಿಯ ಸಂದರ್ಭದಲ್ಲಿ ಗಾಂಧಿನಗರದ ಕೋಬಾ ತೀರ್ಥದಲ್ಲಿ‘ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯʼವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 31st, 10:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದ ಕೋಬಾ ತೀರ್ಥದಲ್ಲಿ ಪಾರಂಪರಿಕ ಜೈನ ವಸ್ತುಸಂಗ್ರಹಾಲಯವಾದ ʻಸಾಮ್ರಾಟ್ ಸಂಪ್ರತಿ ಮ್ಯೂಸಿಯಂʼ ಅನ್ನು ಉದ್ಘಾಟಿಸಿದರು. ಕೋಬಾ ತೀರ್ಥದಲ್ಲಿ ಆಧ್ಯಾತ್ಮಿಕ ಶಾಂತಿ ಆಳವಾಗಿ ಬೇರೂರಿದೆ. ಅನೇಕ ಜೈನ ಮುನಿಗಳು ಮತ್ತು ಸಂತರು ತಮ್ಮ ತಪ್ಪಸ್ಸಿನ ಅಭಿವ್ಯಕ್ತಿಯನ್ನು ಕಂಡುಕೊಂಡ ಈ ಸ್ಥಳದಲ್ಲಿ ಸೃಷ್ಟಿ ಮತ್ತು ಸೇವೆ ಸ್ವಾಭಾವಿಕವಾಗಿ ಅರಳುತ್ತದೆ, ಎಂದು ಶ್ರೀ ಮೋದಿ ಹೇಳಿದರು.

ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 28th, 02:39 pm

ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.

ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 28th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.