ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ​​​​​​​ ಸಂವಾದ

February 09th, 10:30 am

ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.

ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಭಾರತ ಸಿಂಗಾಪುರ ಜಂಟಿ ಹೇಳಿಕೆ

September 04th, 08:04 pm

ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆ

ಭಾರತ ಬಗ್ಗೆ ವಿಶ್ವಾಸದ ಮಾತುಗಳಿಗೆ ಸಿಂಗಾಪುರ ಪ್ರಧಾನಮಂತ್ರಿ ಲಾರೆನ್ಸ್ ವಾಂಗ್ ಗೆ ಧನ್ಯವಾದ ಹೇಳಿದ ಪ್ರಧಾನಮಂತ್ರಿ ಮೋದಿ

September 04th, 01:04 pm

ಭಾರತ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ ಸಿಂಗಾಪುರ ಪ್ರಧಾನಮಂತ್ರಿ ಶ್ರೀ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಹೇಳಿದ್ದಾರೆ. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಪಯಣದಲ್ಲಿ ಸಿಂಗಾಪುರವು ಮೌಲ್ಯಯುತ ಪಾಲುದಾರ ದೇಶ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 04th, 12:45 pm

ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.

ಚುನಾವಣಾ ವಿಜಯಕ್ಕಾಗಿ ಶ್ರೀ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

May 04th, 09:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಲಾರೆನ್ಸ್ ವಾಂಗ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತ ಮತ್ತು ಸಿಂಗಾಪುರದ ನಡುವಿನ ನಿಕಟವಾಗಿರುವ ಜನರಿಂದ ಜನರ ನಡುವಿನ ಪರಸ್ಪರ ಸಂಬಂಧಗಳಿಂದ ಆಧಾರವಾಗಿರುವ ಬಲವಾದ ಮತ್ತು ಬಹುಮುಖಿ ಪಾಲುದಾರಿಕೆಗೆ ಅವರು ಈ ಸಂದರ್ಭದಲ್ಲಿ ಒತ್ತು ನೀಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 28th, 11:30 am

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!

ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

January 28th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಗಳಿಂದ ಸಿಂಗಾಪುರ ಅಧ್ಯಕ್ಷರ ಭೇಟಿ

January 16th, 11:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಂಗಾಪುರದ ಅಧ್ಯಕ್ಷ ಶ್ರೀ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿಯಾದರು. ಸಂಪೂರ್ಣ ಶ್ರೇಣಿಯ ಭಾರತ-ಸಿಂಗಾಪುರ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯ ಬಗ್ಗೆ ನಾವು ಚರ್ಚಿಸಿದೆವು. ಅರೆವಾಹಕಗಳು, ಡಿಜಿಟಲೀಕರಣ, ಕೌಶಲ್ಯ, ಸಂಪರ್ಕ ಮತ್ತಿತರ ಭವಿಷ್ಯದ ವಲಯಗಳ ಬಗ್ಗೆ ನಾವು ಮಾತನಾಡಿದೆವು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!